ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ – Vishwanews24

Featured, ಉಡುಪಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ – Vishwanews24

ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದು ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು.

ಮಧ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ಹಾಗೂ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು.

ಬಳಿಕ ಅವರು ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಗವಾನ್ ಋಷಿಕೇಶಿ ಸೋಣವಾಣೆ, ಪುತ್ತೂರು ಎಸಿ ಗಿರೀಶ್ ನಂದನ್, ಕಡಬ ಇಒ ನವೀನ್ ಭಂಡಾರಿ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಸುಬ್ರಹ್ಮಣ್ಯ ಗ್ರಾ.ಪಂ. ಚುನಾಯಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಪ್ರಶಸ್ತಿ ಪಡೆಯಲಿದ್ದಾರೆ ಸರಿಗಮಪ ಖ್ಯಾತಿಯ ಪುಟಾಣಿ ಜ್ಞಾನ – Vishwanews24

Leave a Reply