ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಾಲಿವುಡ್ ನಟಿ ಕತ್ರಿನಾ ಕೈಫ್ – vishwanews24
ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದ ಬಾಲಿವುಡ್ ನಟಿ ಕತ್ರಿನಾ ಕೈಫ್
ಕುಕ್ಕೆ : ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಬಾಲಿವುಡ್ ಖ್ಯಾತ ನಟಿ ಕತ್ರೀನಾ ಕೈಫ್ ರಾಜ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ್ದು ,ಇಂದು ಮತ್ತು ನಾಳೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕತ್ರೀನಾ ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೆ ಉಳಿದುಕೊಳ್ಳಲಿರುವ ಬಾಲಿವುಡ್ ನಟಿ ನಾಳೆ ಸರ್ಪ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ. ಮಾಸ್ಕ್ ಹಾಕಿ, ತಲೆಗೆ ದುಪ್ಪಟ್ಟ ಹಾಕಿ ದೇವರ ದರ್ಶನದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ.

ಆದಿ ಸುಬ್ರಹ್ಮಣ್ಯದ ಸರ್ಪಸಂಸ್ಕಾರ ಯಾಗಶಾಲೆಯಲ್ಲಿ ಇಂದು ಮತ್ತು ನಾಳೆ ಸರ್ಪ ಸಂಸ್ಕಾರ ಸೇವೆಯನ್ನು ನಟಿ ಕತ್ರಿನಾ ಕೈಫ್ ನೆರವೇರಿಸಲಿದ್ದಾರೆ.
ಉಡುಪಿ: ಗೀತಾಂಜಲಿ ಸಿಲ್ಕ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ – vishwanews24
