ಕೃಷಿ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿದ ಬಜೆಟ್ : ಸಚಿವ ಅಂಗಾರ-vishwanews24
ಕೃಷಿ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿದ ಬಜೆಟ್ : ಸಚಿವ ಅಂಗಾರ
ಕಾಪು: ಕೊರೋನಾ ಮಹಾಮಾರಿಯಿಂದ ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ದೂರದೃಷ್ಟಿಯನ್ನು ಇಟ್ಟುಕೊಂಡು ದೇಶವನ್ನು ಆತ್ಮನಿರ್ಭರಗೊಳಿಸುವ ಚಿಂತನೆಯೊಂದಿಗೆ ಮೂಲಸೌಕರ್ಯ ಮತ್ತು ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಿದ ಅತ್ಯುತ್ತಮ ಬಜೆಟ್ ಮಂಡಿಸಲಾಗಿದೆ.ಬಜೆಟ್ ಸ್ವಾವಲಂಬನೆಗೆ ಒತ್ತು ನೀಡಿದ್ದು ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ರೈತರ ಆದಾಯ ಧ್ವಿಗುಣಗೊಳಿಸುವ ಜೊತೆಗೆ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಹಾಗೂ ಆತ್ಮನಿರ್ಭರ ಭಾರತದ ಪರಿಕಲ್ಪನೆಯೊಂದಿಗೆ ಸಮೃದ್ಧ ಭಾರತ ನಿರ್ಮಾಣಕ್ಕೆ ನಾಂದಿ ಹಾಡಲಿದೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಸರ್ಕಾರದ ಬಂದರು ಮತ್ತು ಮೀನುಗಾರಿಕ ಸಚಿವ ಎಸ್ ಅಂಗಾರ ತಿಳಿಸಿದರು.
ಉಡುಪಿಯ ಮಲ್ಪೆ ಪಡುಕೆರೆಯಲ್ಲಿ ನಿರ್ಮಾಣವಾಗುವ ಮರಿನಾ ಯೋಜನೆಯ ಕುರಿತಾದ ಮಂಗಳವಾರ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ,ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರಬಾಬು,ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ,ಯಶ್ಪಾಲ್ ಸುವರ್ಣ, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.





