ಕೆಎಂಎಫ್ ಅಧ್ಯಕ್ಷ ಚುನಾವಣೆ : ಬಿಜೆಪಿಯ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು :ಕರ್ನಾಟಕ ಹಾಲು ಒಕ್ಕೂಟಗಳ ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷರಾಗಿ ಬಿಜೆಪಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟು, ತೀವ್ರ ಲಾಬಿ ನಡೆಸಿದ್ದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ವಾಪಸ್‌ ಪಡೆದರು. ಹಿಂದೆ ಅವರು ಎರಡು ಬಾರಿ ಅಧ್ಯಕ್ಷರಾಗಿದ್ದರು.

16 ಕೆಎಂಎಫ್ ನಿರ್ದೇಶಕರಲ್ಲಿ, 13 ನಿರ್ದೇಶಕರು ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಈ ಮೂಲಕ ಕೆಎಂಎಫ್ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಆಯ್ಕೆಯಾಗಿ ಬಿಟ್ಟರು ಎಂದೇ ಹೇಳಲಾಗುತ್ತಿದೆ. ಅಲ್ಲದೇ ಅಧಿಕೃತ ಘೋಷಣೆಯೊಂದೆ ಬೇಕಿ ಇದೆ.

ಈ ನಡುವೆ ಚುನಾವಣಾ ಕಣದಲ್ಲಿದ್ದ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ತಮ್ಮ ನಾಮಪತ್ರವನ್ನು ವಾಪಾಸ್ ಪಡೆದಿದ್ದಾರೆ. ಈ ಮೂಲಕ ಬಾಲಚಂದ್ರ ಜಾರಕಿಹೊಳಿಯವರ ಗೆಲುವಿಗೆ ಮತ್ತಷ್ಟು ಹಾದಿಯನ್ನು ಸುಗಮ ಮಾಡಿಕೊಟ್ಟ ಪರಿಣಾಮ, ಇದೀಗ ಬಾಲಚಂದ್ರ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬಾಲಚಂದ್ರ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

‘ಕೆಎಂಎಫ್‌ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ನೇತೃತ್ವದಲ್ಲಿ ಕೆಎಂಎಫ್ ಉತ್ತಮವಾಗಿ ಕಾರ್ಯ ನಿರ್ವಹಿಸಿ, ಹಾಲು ಉತ್ಪಾದಕ ರೈತರಿಗೆ ಮತ್ತು ಗ್ರಾಹಕರಿಬ್ಬರಿಗೂ ಲಾಭ ದೊರೆಯಲೆಂದು ಆಶಿಸುತ್ತೇನೆ‘ ಎಂದು ಟ್ವೀಟಿಸಿದ್ದಾರೆ.