ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ -Vishwanews24
ಬೆಂಗಳೂರು,: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ(ಕೆಎಂಎಫ್)ಯ ನೂತನ ಅಧ್ಯಕ್ಷರಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಬಾಲಚಂದ್ರ ಜಾರಕಿಹೊಳಿ ಅವರು ಮಹಾಮಂಡಳಿಯ 13 ನಿರ್ದೇಶಕರ ಬೆಂಬಲ ಗಳಿಸುವಲ್ಲಿ ಸಫಲರಾಗಿದ್ದಾರೆ ಎಂದು ತಿಳಿದುಬಂದಿದೆ.
”ನಾವು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಣದ ಜತೆ ಗುರುತಿಸಿಕೊಂಡಿದ್ದೇವೆ. ಆದರೆ ಸರಕಾರ ಯಾರದು ಇದೆಯೋ ಅವರಿಗೆ ಬೆಂಬಲ ನೀಡುವಂತೆ ನಮ್ಮ ನಾಯಕರು ಸೂಚಿಸಿದ್ದಾರೆ. ಹೀಗಾಗಿ ನಾವು ಬಾಲಚಂದ್ರ ಜಾರಕಿಹೊಳಿ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದೇವೆ” ಎಂದು ಬೆಂಗಳೂರು ಡೈರಿ ಅಧ್ಯಕ್ಷ ಆನಂದಕುಮಾರ್ ತಿಳಿಸಿದ್ದಾರೆ.
