ಕೇಂದ್ರ ಬಜೆಟ್ ಭವಿಷ್ಯದ ಭಾರತಕ್ಕೆ ಪೂರಕವಾದ ನೀತಿ- ನಿರೂಪಕ ಅಂಶಗಳನ್ನು ಹೊಂದಿದೆ : ಸುನಿಲ್ ಕುಮಾರ್ – Vishwanews24
ಕೇಂದ್ರ ಬಜೆಟ್ ಭವಿಷ್ಯದ ಭಾರತಕ್ಕೆ ಪೂರಕವಾದ ನೀತಿ- ನಿರೂಪಕ ಅಂಶಗಳನ್ನು ಹೊಂದಿದೆ : ಸುನಿಲ್ ಕುಮಾರ್ – VIshwanews24
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್ ಭವಿಷ್ಯದ ಭಾರತಕ್ಕೆ ಪೂರಕವಾದ ನೀತಿ- ನಿರೂಪಕ ಅಂಶಗಳನ್ನು ಹೊಂದಿದೆ. ಇಂಧನ ಕ್ಷೇತ್ರಕ್ಕೆ ದೂರದೃಷ್ಟಿಯ ಸ್ಪರ್ಶ ನೀಡಿದ್ದಾರೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಮುಂದಿನ 25 ವರ್ಷಗಳ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ತಯಾರಿಸಲಾಗಿದೆ. ಯಾವುದೇ ಒಂದು ವರ್ಗದ ಓಲೈಕೆಗೆ ಸೀಮಿತವಾಗಿರದೇ ಪಾಲಿಸಿ ಆಧರಿತ ಕಾರ್ಯಕ್ರಮಗಳ ಜಾರಿಗೆ ಕೇಂದ್ರ ಆದ್ಯತೆ ನೀಡಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಸ್ವಚ್ಛ ಇಂಧನಕ್ಕೆ ಬಜೆಟ್ ನಲ್ಲಿ ಒತ್ತು ನೀಡಿದ್ದಾರೆ.
ಕೇಂದ್ರ ಸರಕಾರದ ಆದ್ಯತಾ ವಲಯದಲ್ಲಿ ಇಂಧನ ಕ್ಷೇತ್ರ ಸೇರಿದ್ದು, ವಿದ್ಯುತ್ ಪ್ರಸರಣ ಮತ್ತು ಆಧುನೀಕರಣಕ್ಕೆ ಒತ್ತು ನೀಡಿದ್ದಾರೆ. ವಿಶೇಷವಾಗಿ ಹಸಿರು ಶಕ್ತಿ ಮೂಲಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಸುಸ್ಥಿರ ಅಭಿವೃದ್ಧಿಗೆ ಕಡಿಮೆ ಇಂಗಾಲ ಬಿಡುಗಡೆ ಮಾಡುವ ಶಕ್ತಿ ಮೂಲಗಳ ಬಳಕೆಗೆ ಅಗತ್ಯ ಎಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ವಿಶ್ವ ವೇದಿಕೆಯಲ್ಲಿ ಪ್ರತಿಪಾದಿಸಿದ್ದರು. ಇದರ ಮುಂದುವರಿದ ಭಾಗವಾಗಿ ʼಪಂಚಾಮೃತʼ ಕಲ್ಪನೆಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಿದ್ದಾರೆ.
ಇದನ್ನೂ ಓದಿ :
ಕುಂದಾಪುರ : ಬಸ್ರೂರ್ ನಲ್ಲಿ ರಾಕಿಂಗ್ ಸ್ಟಾರ್ , ಆನೆಗುಡ್ಡೆ ವಿನಾಯಕನ ದರ್ಶನ – Vishwanews24
ಯಾವುದೋ ಒಂದು ರಾಜ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ಘೋಷಿಸುವ ಪರಂಪರೆಯನ್ನು ಈ ಬಾರಿ ಕೈ ಬಿಡಲಾಗಿದೆ. ದೇಶದ ಸಮಷ್ಠಿ ದೃಷ್ಟಿಕೋನ ಬಜೆಟ್ ನಲ್ಲಿದೆ. ನವೋದ್ಯಮ, ಕೃಷಿ, ರೈಲು, ಇಂಧನದ ಜತೆಗೆ ರಕ್ಷಣಾ ಇಲಾಖೆಯಲ್ಲಿ ಆತ್ಮ ನಿರ್ಭರತೆಗೆ ಕೇಂದ್ರ ಒತ್ತುನೀಡಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರದ ಕೊಡುಗೆ ವಿಫುಲವಾಗಿದೆ. “ಒನ್ ಕ್ಲಾಸ್ ಒನ್ ಟಿವಿ ಚಾನಲ್” ಮೂಲಕ ಇ- ವಿದ್ಯಾ ಯೋಜನೆ ಜಾರಿಗೆ ಮುಂದಾಗಿದೆ. ಇದು ಕೋವಿಡ್ ಸಂದರ್ಭದಲ್ಲಿ ಪೂರ್ಣ ಶಿಕ್ಷಣ ವಂಚಿತ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗುತ್ತದೆ. ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ :
