ಕೇಂದ್ರ ಮೀನುಗಾರಿಕೆ ಸಚಿವ ಎಲ್. ಮುರುಗನ್ ರವರಿಗೆ ಶ್ರೀ ಯಶ್ ಪಾಲ್ ಸುವರ್ಣ ಅಭಿನಂದನೆ -Vishwanews24
ಕೇಂದ್ರ ಮೀನುಗಾರಿಕೆ ಸಚಿವ ಎಲ್. ಮುರುಗನ್ ರವರಿಗೆ ಶ್ರೀ ಯಶ್ ಪಾಲ್ ಸುವರ್ಣ ಅಭಿನಂದನೆ -Vishwanews24
ಕೇಂದ್ರ ಸರಕಾರದ ಮೀನುಗಾರಿಕೆ ಮತ್ತು ಪಶು ಸಂಗೋಪನೆ, ಡೈರಿ ಇಲಾಖೆಯ ನೂತನ ರಾಜ್ಯ ಸಚಿವರಾದ ಶ್ರೀ ಎಲ್ ಮುರುಗನ್ ರವರನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಭೇಟಿಯಾಗಿ ಉಡುಪಿ ಶ್ರೀ ಕೃಷ್ಣ ಮಠದ ಪ್ರಸಾದವನ್ನು ನೀಡಿ ಅಭಿನಂದನೆ ಸಲ್ಲಿಸಿದರು.
ಕರ್ನಾಟಕ ಕರಾವಳಿ ಹಾಗೂ ರಾಜ್ಯದ ಮೀನುಗಾರರ ಸಮಸ್ಯೆಗಳ ಬಗ್ಗೆ ಹಾಗೂ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಮತ್ಸ್ಯ ಸಂಪದ ಹಾಗೂ ಸಾಗರಮಾಲೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಿ ಮೀನುಗಾರಿಕೆ ಅಭಿವೃದ್ಧಿಯ ಬಗ್ಗೆ ಸಚಿವರೊಂದಿಗೆ ಸಮಾಲೋಚನೆ ನಡೆಸಿದರು.
ಮನವಿಗೆ ಸ್ಪಂದಿಸಿದ ಸಚಿವರು ಶೀಘ್ರದಲ್ಲಿಯೇ ಕರ್ನಾಟಕ ಕರಾವಳಿ ಜಿಲ್ಲೆಗೆ ಭೇಟಿ ನೀಡಿ ಮೀನುಗಾರರ ಸಮಸ್ಯೆಗಳ ಬಗ್ಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.
