ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ  – vishwanews24

Featured, ರಾಜ್ಯ ನ್ಯೂಸ್

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ 

ಬೆಂಗಳೂರು: “ಬರಗಾಲದ ಪರಿಸ್ಥಿತಿಯಲ್ಲಿ ನಾವು ರೈತರನ್ನು ಬದುಕಿಸಬೇಕು. ಕೇಂದ್ರ ಸರಕಾರ ಕೈಗಾರಿಕೋದ್ಯಮಿಗಳಿಗೆ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದಂತೆ ರೈತರ ಸಾಲವನ್ನು ಮನ್ನಾ ಮಾಡಲಿ. ನಮ್ಮ ರಾಜ್ಯದ ಪಾಲನ್ನು ಭರಿಸಲು ಸಿದ್ಧರಿದ್ದೇವೆ” ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಘೋಷಿಸಿದರು.

ವಿಧಾನಮಂಡಲದ ಉಭಯ ಸದನಗಳಲ್ಲಿ ಬರದ ವಿಚಾರವಾಗಿ ನಡೆದ ವಿಶೇಷ ಚರ್ಚೆ ಬಳಿಕ ಸಿಎಂ ಡಿ ಕೆ ಶಿವಕುಮಾರ್ ಅವರು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಮಾತುಗಳಿಗೆ ಉತ್ತರ ನೀಡಿದರು.

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರೀ ಅನಾಹುತ – vishwanews24

“ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ರೈತರ ಸಾಲಮನ್ನಾ ಬಗ್ಗೆ ಸದನದಲ್ಲಿ ಚರ್ಚೆ ನಡೆದಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಸಾಲ ಮನ್ನಾ ಮಾಡಿದ್ದಾರೆ. ನಮ್ಮ ಬೆಂಬಲಿತ ಸರಕಾರದಲ್ಲಿ ಕುಮಾರಸ್ವಾಮಿ ಅವರು ಸಾಲ ಮನ್ನಾ ಮಾಡಿದ್ದಾರೆ. 80 ಶಾಸಕರ ಸಂಖ್ಯಾಬಲವಿದ್ದ ನಾವು ಬೆಂಬಲ ನೀಡದೇ ಇದ್ದಿದ್ದರೆ 38 ಶಾಸಕರ ಬೆಂಬಲವಿದ್ದ ಕುಮಾರಸ್ವಾಮಿ ಅವರು ಸಾಲ ಮನ್ನಾ ಮಾಡಲು ಆಗುತ್ತಿತ್ತೇ?” ಎಂದು ಪ್ರಶ್ನಿಸಿದರು.

Leave a Reply