ಕೊಕ್ಕಡ : ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ಅಪಘಾತ ; ಹಲವರಿಗೆ ಗಾಯ – vishwanews24
ಕೊಕ್ಕಡ : ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ಅಪಘಾತ ; ಹಲವರಿಗೆ ಗಾಯ
ಬೆಳ್ತಂಗಡಿ: ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಸೆ. 12 ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಧರ್ಮಸ್ಥಳ ದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯ ದಿಂದ ಧರ್ಮಸ್ಥಳ ಕ್ಕೆಬರುತ್ತಿದ್ದ ಬಸ್ ಮುಖಾಮುಖಿಯಾಗಿ ಢಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗ ಮತ್ತು ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ.
ಪಂಚ ಗ್ಯಾರಂಟಿ ಯೋಜನೆ ತರಲು ನಾನೇ ಮೂಲ ಕಾರಣ : ಸಿಎಂ ಡಿಕೆ ಶಿ – vishwanews24
ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಗಾಯಗಳಾಗಿರುವುದಾಗಿ ಕಾರಿನಲ್ಲಿದ್ದ ಹಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪೊಲೀಸರು ಸ್ಥಳಕ್ಕೆಆಗಮಿಸಿ ಪರಿಶೀಲನೆನಡೆಸಿದ್ದಾರೆ.
ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.
