ಕೊರೊನಾ : ರಾಜ್ಯದ ಜನರು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು : ಸಚಿವ ಸುಧಾಕರ್ – Vishwanews24

Featured, ರಾಜ್ಯ ನ್ಯೂಸ್

ಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು..

ಬೆಂಗಳೂರು: ರಾಜ್ಯದಲ್ಲಿ ಕೊರೊನಾದ ನಾಲ್ಕನೇ ಅಲೆ ಬಂದಿಲ್ಲ. ಆದರೂ ಮಾಸ್ಕ್ ಧರಿಸುವುದು ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ರಾಜ್ಯಗಳಲ್ಲಿ ಕಳೆದೊಂದು ವಾರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇದನ್ನು ಗಮನಿಸಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಇಲಾಖೆಯ ಸಭೆ ನಡೆಸಿ ಕ್ರಮ ವಹಿಸಲಾಗುವುದು ಎಂದರು.

ಇನ್ನುಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇಡುವುದು ಸೇರಿದಂತೆ ಹಲವು ಕ್ರಮ ವಹಿಸಲಾಗಿದ್ದು, ಬೇರೆ ರಾಜ್ಯಗಳಲ್ಲಿ ಸೋಂಕು ಹೆಚ್ಚಾದಾಗ ಸಹಜವಾಗಿ ಹರಡುತ್ತದೆ. ಆದ್ದರಿಂದ ಜನರು ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕಿದೆ. ಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಿದ್ದಾರೆ.

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾನಹಾನಿಕರವಾಗಿ ಪೋಸ್ಟರ್ ತಯಾರಿಸಿ ಪ್ರಾಧ್ಯಾಪಕಿಗೆ ಕಿರುಕುಳ : ಮೂವರ ಬಂಧನ -Vishwanews24

Leave a Reply