ಕೊರೊನಾ ಲಸಿಕೆ ಹಾಕಿಸಿಕೊಂಡ ಓವೈಸಿ ; ಇದು ಕೊರೊನಾದಿಂದ ನನ್ನನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ -Vishwanews24

Featured, ರಾಷ್ಟ್ರ ನ್ಯೂಸ್

ಅಲ್ಲಾಹನು ಸಾಂಕ್ರಾಮಿಕ ರೋಗದಿಂದ ನಮ್ಮನ್ನು ರಕ್ಷಿಸಲಿ..

ಬೇಗನೆ ಲಸಿಕೆ ಪಡೆಯಲು ಅರ್ಹರಾದ ಪ್ರತಿಯೊಬ್ಬರು ಲಸಿಕೆ ಪಡೆಯಿರಿ..

ಕೊರೊನಾ ಲಸಿಕೆ ಹಾಕಿಸಿಕೊಂಡ ಓವೈಸಿ ; ಇದು ಕೊರೊನಾದಿಂದ ನನ್ನನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ -Vishwanews24

ಹೈದರಾಬಾದ್ : ಈ ಹಿಂದೆ ಕೊರೊನಾ ಲಸಿಕೆ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದ ಎಐಎಂಐಎಂ ಪಕ್ಷದ ವರಿಷ್ಠ ಅಸಾದುದ್ದೀನ್ ಓವೈಸಿ ಅವರು ಹೈದರಾಬಾದ್‌ನ ಕಂಚನ್‌ಬಾಗ್ ಆಸ್ಪತ್ರೆಯಲ್ಲಿ ಮೊದಲ ಹಂತದ ಕೊರೊನಾ ಲಸಿಕೆ ಪಡೆದಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ಇಂದು ಮೊದಲ ಡೋಸ್‌ ಕೊರೊನಾ ಲಸಿಕೆ ಹಾಕಿಸಿಕೊಂಡೆ. ಈ ವ್ಯಾಕ್ಸಿನೇಷನ್ ಕೊರೊನಾದಿಂದ ನನ್ನನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ ಮಾತ್ರವಲ್ಲದೆ ಎಲ್ಲರಿಗೂ ಅಪಾಯವನ್ನು ಕಡಿಮೆ ಮಾಡುತ್ತದೆ. ಬೇಗನೆ ಲಸಿಕೆ ಪಡೆಯಲು ಅರ್ಹರಾದ ಪ್ರತಿಯೊಬ್ಬರು ಲಸಿಕೆ ಪಡೆಯಿರಿ ಎಂದು ನಾನು ಕೋರುತ್ತೇನೆ. ಅಲ್ಲಾಹನು ಸಾಂಕ್ರಾಮಿಕ ರೋಗದಿಂದ ನಮ್ಮನ್ನು ರಕ್ಷಿಸಲಿ” ಎಂದು ಹೇಳಿದ್ದಾರೆ.