ಕೊರೊನಾ ವೈರಸ್ ವಿಚಾರ ವಾಟ್ಸಪ್‍ನಲ್ಲಿ ಮೆಸೇಜ್‍ ಸುಳ್ಳು ಸುದ್ದಿ ಎಂದು ಸರ್ಕಾರ ಸ್ಪಷ್ಟನೆ- vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಕೊರೊನಾ ವೈರಸ್ ವಿಚಾರದಲ್ಲಿ ಸಾಮಾಜಿಕ ಜಾಲತಾಣ ಮತ್ತು ವಾಟ್ಸಪ್‍ನಲ್ಲಿ ಮೆಸೇಜ್‍ವೊಂದು ಹರಿದಾಡುತ್ತಿದ್ದು, ಬೆಂಗಳೂರು ಜನರಲ್ಲಿ ಢವ ಢವ ಶುರುವಾಗಿತ್ತು. ಆದರೆ ಇದು ಸಲಿಗೆ ಸುಳ್ಳು ಸುದ್ದಿ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧೆಡೆ ಇಂದು ರಾತ್ರಿ 10ರಿಂದ ನಾಳೆ ಬೆಳಗ್ಗೆ 5 ಗಂಟೆವರೆಗೆ ರಾಸಾಯನಿಕ ಸಿಂಪಡನೆ ಮಾಡಲಾಗುತ್ತಿದೆ. ಮನೆಯಿಂದ ಯಾರೂ ಹೊರಬರಬೇಡಿ. ಇದು ಬೆಂಗಳೂರಿನಲ್ಲಿ ಮಾತ್ರ. ಎಲ್ಲರಿಗೂ ಶೇರ್ ಮಾಡಿ ಎಂಬ ಮೆಸೇಜ್ ಅನ್ನು ಕಿಡಿಗೇಡಿಗಳು ವಾಟ್ಸಪ್‍ನಲ್ಲಿ ಹರಿಬಿಟ್ಟಿದ್ದಾರೆ.

ಸುಳ್ಳು ಸಂದೇಶದಿಂದ ಜನರು ಆತಂಕಕ್ಕೆ ಒಳಗಾಗಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಇಲಾಖೆಯು, ಜನರು ಆತಂಕಕ್ಕೆ ಒಳಗಾಗಬೇಡಿ. ನಗರದಲ್ಲಿ ಯಾವುದೇ ರೀತಿಯ ಕೆಮಿಕಲ್ ಸಿಂಪಡಣೆಯನ್ನು ಮಾಡುವುದಿಲ್ಲ. ಸುಳ್ಳು ಸಂದೇಶಕ್ಕೆ ಕಿವಿಗೊಡಬೇಡಿ ಎಂದು ಅಭಯ ನೀಡಿದೆ.