ಕೊರೊನಾ ಸೋಂಕು ಶಾಲೆಗಳಿಂದ ಹರಡುತ್ತದೆ ಎಂದು ಎಲ್ಲೂ ಸಾಬೀತಾಗಿಲ್ಲ, ಹಾಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸ್ತಾಪ ಇಲ್ಲ : ಬಿ.ಸಿ.ನಾಗೇಶ್ – VIshwanews24

Featured, ರಾಜ್ಯ ನ್ಯೂಸ್

ಕೊರೊನಾ ಸೋಂಕು ಶಾಲೆಗಳಿಂದ ಹರಡುತ್ತದೆ ಎಂದು ಎಲ್ಲೂ ಸಾಬೀತಾಗಿಲ್ಲ, ಹಾಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸ್ತಾಪ ಇಲ್ಲ : ಬಿ.ಸಿ.ನಾಗೇಶ್ – VIshwanews24

ಬೆಂಗಳೂರು: ಕೊರೊನಾ ಸೋಂಕು ಶಾಲೆಗಳಿಂದ ಹರಡುತ್ತದೆ ಎಂದು ಎಲ್ಲೂ ಸಾಬೀತಾಗಿಲ್ಲ. ಹಾಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸ್ತಾಪ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಮಾತ್ರ ಕೋವಿಡ್ ಸೋಂಕು ಹೆಚ್ಚಿರುವುದರಿಂದ ಇಲ್ಲಿ ಮಾತ್ರ ಶಾಲೆ ಬಂದ್ ಮಾಡಿದ್ದೇವೆ. ಆದರೆ ರಾಜ್ಯದ ಇತರ ಭಾಗಗಳಲ್ಲಿ ಇದೇ ಪರಿಸ್ಥಿತಿ ಇಲ್ಲ.ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಭೌತಿಕ ತರಗತಿ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿ ನಡೆಸುತ್ತೇವೆ” ಎಂದರು.

ಇನ್ನು ತಾಲೂಕು ಮಟ್ಟದಲ್ಲಿ ಪಾಸಿಟಿವಿಟಿ ದರ ಹೆಚ್ಚಾದರೆ ಶಾಲೆಯನ್ನು ಮುಚ್ಚುವ ಬಗ್ಗೆ ಜಿಲ್ಲಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಶಾಲೆಗಳಿಂದ ಕೊರೊನಾ ಹರಡುತ್ತದೆ ಎಂಬ ಬಗ್ಗೆ ಯಾವುದೇ ಅಧ್ಯಯನ ವರದಿ ಇಲ್ಲ ಎಂದು ಹೇಳಿದ್ದಾರೆ.

ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ಗೆ ಕೊರೊನಾ ದೃಢ : ಐಸಿಯುವಿನಲ್ಲಿ ಚಿಕಿತ್ಸೆ – Vishwanews24

Leave a Reply