ಕೊರೋನಾದಿಂದ ಕುಟುಂಬ ನಾಶ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ -Vishwanews24

Featured, ರಾಜ್ಯ ನ್ಯೂಸ್

ಕೊರೋನಾದಿಂದ ಕುಟುಂಬ ನಾಶ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ -Vishwanews24

ಬೆಂಗಳೂರು, : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಹೊರವಲಯದ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿರುವುದು ವರದಿಯಾಗಿದೆ.

ತೋಟದ ಗುಡ್ಡದಹಳ್ಳಿ ಹತ್ತಿರದ ಪ್ರಕೃತಿ ಲೇಔಟ್ ನಿವಾಸಿ ವಸಂತಾ(40), ಮಕ್ಕಳಾದ ಯಶವಂತ್ (15) ಹಾಗೂ ನಿಶ್ಚಿತಾ (8) ಮೃತಪಟ್ಟವರಾಗಿದ್ದಾರೆ. ಮೃತರ ಮನೆಗೆ ಸಂಬಂಧಿಕರು ರಾತ್ರಿ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಿಎಂಟಿಸಿ ಚಾಲಕ ಕಂ ನಿರ್ವಾಹಕರಾಗಿದ್ದ ವಸಂತ ಅವರ ಪತಿ ಕಳೆದ ವರ್ಷ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು. ಇದರಿಂದ ವಸಂತಾ ಖಿನ್ನತೆಗೊಳಗಾಗಿದ್ದರು. ಇದೇ ಯಾತನೆಯಲ್ಲೇ ಅವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿಬರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಒಂದೇ ಫ್ಯಾನ್’ಗೆ ಮಗಳು ನಿಶ್ಚಿತಾ ಜೊತೆ ವಸಂತಾ ನೇಣು ಹಾಕಿಕೊಂಡಿದ್ದರೆ, ಯಶವಂತ್ ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.11 ರಿಂದ ಕನ್ನಡದಲ್ಲಿ ಪ್ರಸರಾವಾಗಲಿದೆ ತಿರುಪತಿ ಚಾನೆಲ್ – Vishwanews24