ಕೊರೋನಾ ರೂಪಾಂತರ : ಲಂಡನ್‌ನಿಂದ ಜಿಲ್ಲೆಗೆ ವಾಪಸಾದ 36 ಮಂದಿಯ ಕೋವಿಡ್ ರಿಪೋರ್ಟ್ ನೆಗೆಟಿವ್ : ಡಿ.ಸಿ.ಜಿ.ಜಗದೀಶ್ -Vishwanews24

Featured, ಉಡುಪಿ

ಕೊರೋನಾ ರೂಪಾಂತರ : ಲಂಡನ್‌ನಿಂದ ಜಿಲ್ಲೆಗೆ ವಾಪಸಾದ 36 ಮಂದಿಯ ಕೋವಿಡ್ ರಿಪೋರ್ಟ್ ನೆಗೆಟಿವ್ : ಡಿ.ಸಿ.ಜಿ.ಜಗದೀಶ್ -Vishwanews24

ಉಡುಪಿ:ಕರ್ನಾಟಕದಲ್ಲಿ ಬ್ರಿಟನ್ ವೈರಸ್ ದೃಡಪಟ್ಟ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಲಂಡನ್‌ನಿಂದ ವಾಪಸಾದ 36 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದೇವೆ.ಎಲ್ಲರ ಕೋವಿಡ್ ರಿಪೋರ್ಟ್ ನೆಗೆಟಿವ್ ಬಂದಿದೆ.ಮುನ್ನೆಚ್ಚರಿಕಾ ಕ್ರಮವಾಗಿ 14 ದಿನಗಳ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ಡಿ.ಸಿ.ಜಗಧೀಶ್ ಹೇಳಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಲಂಡನ್ ನಿಂದ ಆಗಮಿಸಿದವರ ನಿರಂತರ ಸಂಪರ್ಕದಲ್ಲಿ ಇದ್ದಾರೆ.ಕಾಯಿಲೆ ಲಕ್ಷಣಗಳು ಕಂಡು ಬಂದರೆ ಮತ್ತೊಮ್ಮೆ ಪರೀಕ್ಷೆ ನಡೆಸುತ್ತೇವೆ.ಸದ್ಯಕ್ಕೆ ಜಿಲ್ಲೆಯಲ್ಲಿ ಬ್ರಿಟನ್ ವೈರಸ್ ಆತಂಕ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಮಾಸ್ಕ್ , ಸಾಮಾಜಿಕ ಅಂತರ ಕಡ್ಡಾಯ, ಮಾಸ್ಕ್ ಹಾಕದೇ ಇರುವವರಿಗೆ ದಂಡ ಹಾಕಲಾಗುವುದು ಎಂದೂ ಅವರು ಎಚ್ಚರಿಸಿದ್ದಾರೆ.