ಕೊರೋನಾ 4ನೇ ಅಲೆ ಭೀತಿ : ಇಂದು ಎಲ್ಲಾ ರಾಜ್ಯದ ಸಿಎಂಗಳ ಜತೆ ಪ್ರಧಾನಿ ಮೋದಿ ಸಭೆ – Vishwanews24
ಕೊರೋನಾ 4ನೇ ಅಲೆ ಭೀತಿ : ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ಮೋದಿ ಸಭೆ,
ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ವಿಡಿಯೋ ಕಾನ್ಫರೆನ್ಸ್ನಲ್ಲಿ ಬೊಮ್ಮಾಯಿ ಭಾಗಿ ..
ನವದೆಹಲಿ: ಭಾರತದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಹೆಚ್ಚಾಗಿದ್ದು, 4ನೇ ಅಲೆ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ನಡೆಸಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿದ್ದು, ಅಲ್ಲಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಲಿದ್ದಾರೆಂದು ತಿಳಿದುಬಂದಿದೆ.
ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿಯವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದು, ಸಭೆಯಲ್ಲಿ ಬೊಮ್ಮಾಯಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಳ್ಳಲಿದ್ದಾರೆ.
ಈ ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ ಭೂಷಣ್ ಕೂಡ ಭಾಗಿಯಾಗಲಿದ್ದು, ಪರಿಸ್ಥಿತಿಯ ವಿವರಣೆ ನೀಡಲಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
