ಕೊಲೆಯತ್ನ ಆರೋಪ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ – vishwanews24
ಕೊಲೆಯತ್ನ ಆರೋಪ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
ಕಲಬುರಗಿ: ಕೊಲೆಯತ್ನ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ನೆಲೋಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಬಳಿ ಮಣಿಕಂಠ ರಾಠೋಡ್ ಅವರನ್ನು ಬಂಧಿಸಲಾಗಿದೆ. ಗುರುವಾರ ತಡರಾತ್ರಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಾಟಿ ಔಷಧಿ ಕೊಡುತ್ತಿದ್ದ ರಶೀದ್ ಮತ್ಯಾ ಬಂಧನಕ್ಕೆ ಮಣಿಕಂಠ ರಾಠೋಡ್ ಆಗ್ರಹಿಸಿದ್ದರು. ಅಲ್ಲದೇ ಬೆಂಬಲಿಗರೊಂದಿಗೆ ಗ್ರಾಮಕ್ಕೆ ತೆರಳಿ ದೊಡ್ಡ ಹೈಡ್ರಾಮ ಕ್ರಿಯೇಟ್ ಮಾಡಿದ್ದರು. ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ತಲೆಗೆ ಕಲ್ಲೇಟು ಬಿದ್ದಿತ್ತು. ಸದ್ಯ ರಶೀದ್ ಮುತ್ಯಾ ಚಾಲಕನ ದೂರಿನ ಮೇರೆಗೆ ಮಣಿಕಂಠ ರಾಠೋಡ್ ಅವರನ್ನು ಬಂಧಿಸಲಾಗಿದೆ.
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಯುವತಿ ಸಾವು ; ಯುವಕ ಗಂಭೀರ – vishwanews24
