ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ – vishwanews24
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್
ಕೊಲ್ಲೂರು: ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಅವರು ಶನಿವಾರ ಬೆಳಿಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದರು.
ಶುಕ್ರವಾರ ರಾತ್ರಿಯೇ ಕೊಲ್ಲೂರಿಗೆ ಆಗಮಿಸಿದ್ದ ಅವರು ಶನಿವಾರ ಮುಂಜಾನೆ ದೇವರ ದರ್ಶನ ಪಡೆದರು. ಈ ಸಂದರ್ಭ ದೇವಸ್ಥಾನದ ವತಿಯಿಂದ ಸಿಎಂ ವಿ.ಡಿ. ಸತೀಶನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ಇದನ್ನೂ ಓದಿ :
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ – vishwanews24
ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಘುರಾಮ್ ದೇವಾಡಿಗ, ಸುರೇಂದ್ರ ಶೆಟ್ಟಿ, ಧನಾಕ್ಷಿ ವಿಶ್ವನಾಥ ಪೂಜಾರಿ, ಮಹಾಲಿಂಗ ನಾಯ್ಕ್, ಮೊದಲಾದವರಿದ್ದರು.
