ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ – vishwanews24
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಸಿಎಂ ಸಿ. ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಜೊತೆಗೆ ದೇವಿಗೆ ವಿಶೇಷ ಕಾಣಿಕೆಯನ್ನೂ ಅರ್ಪಿಸಿ ಕೃಪೆಗೆ ಪಾತ್ರರಾದರು.

ಶಕ್ತಿ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್ ಸುಮಾರು ಅರ್ಧ ಗಂಟೆಗಳ ಕಾಲ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಾಯಿಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗವನ್ನ ಕಾಣಿಕೆಯಾಗಿ ಅರ್ಪಿಸಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಬಾಬು ಹೆಗಡೆ ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24
