ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ :ಆರೋಪಿ ಸಂಜಯ್ ರಾಯ್ ದೋಷಿ – vishwanews24
ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ :ಆರೋಪಿ ಸಂಜಯ್ ರಾಯ್ ದೋಷಿ
ಕೋಲ್ಕತ್ತಾ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾದ ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಕತ್ತಾ ಸೆಷನ್ಸ್ ನ್ಯಾಯಾಲಯ ಇಂದು(ಶನಿವಾರ) ಮಹತ್ವದ ತೀರ್ಪು ನೀಡಿದೆ.
ಆರ್ಜಿ ಕರ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯೆಯ ಮೇಲೆ ಅತ್ಯಾಚಾರ -ಕೊಲೆ ಮಾಡಿದ ಆರೋಪಿ ಸಂಜಯ್ ರಾಯ್ ದೋಷಿ ಎಂದು ನ್ಯಾ. ಅನಿರ್ಬನ್ ದಾಸ್ ತೀರ್ಪು ಪ್ರಕಟಿಸಿದ್ದಾರೆ. ಅದರಂತೆ ಶಿಕ್ಷೆಯ ಪ್ರಮಾಣವನ್ನು ಜನವರಿ 20ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಆಗಸ್ಟ್ 9, 2024 ರಂದು ಕೋಲ್ಕತ್ತಾದ ಆರ್ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈಯಲಾಗಿತ್ತು ಘಟನೆ ನಡೆದು ಸರಿ ಸುಮಾರು 57 ದಿನದಲ್ಲೇ ಕೋರ್ಟ್ ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ತೀರ್ಪನ್ನು ಪ್ರಕಟಿಸಿದೆ.
