ಕೋವಿಡ್ ಹೆಚ್ಚಳ: ಉಡುಪಿ ಪರ್ಯಾಯೋತ್ಸವದ ಮೆರವಣಿಗೆಯಲ್ಲಿ ಟ್ಯಾಬ್ಲೋ ಪ್ರದರ್ಶನ ರದ್ದು -Vishwanews24
ಕೋವಿಡ್ ಹೆಚ್ಚಳ: ಉಡುಪಿ ಪರ್ಯಾಯೋತ್ಸವದ ಮೆರವಣಿಗೆಯಲ್ಲಿ ಟ್ಯಾಬ್ಲೋ ಪ್ರದರ್ಶನ ರದ್ದು -Vishwanews24
ಉಡುಪಿ: ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರ ಚತುರ್ಥ ಪರ್ಯಾಯ ಮಹೋತ್ಸವಕ್ಕೆ ಸಿದ್ಧಗೊಂಡಿದ್ದು ಆದರೆ ಕೋರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಪರ್ಯಾಯೋತ್ಸವ ಸಮಿತಿಯ ಗೌರವ ಕಾರ್ಯಾಧ್ಯಕ್ಷರಾದ ಶಾಸಕ ಕೆ. ರಘುಪತಿ ಭಟ್ ರವರು ಇಲಾಖೆಯ ಅಧಿಕಾರಿಗಳೊಂದಿಗೆ ಇಂದು (ಜ .17) ರಂದು ಸಭೆ ನಡೆಸಿ ಚರ್ಚಿಸಿದರು.

ಸಭೆಯಲ್ಲಿ ಪರ್ಯಾಯಕ್ಕೆ ಸಜ್ಜುಗೊಂಡ ಎಲ್ಲಾ ಟ್ಯಾಬ್ಲೊಗಳನ್ನು ರದ್ದುಪಡಿಸಿ ಸಂಪ್ರದಾಯಕ್ಕೆ ಒತ್ತುಕೊಟ್ಟು ಪರ್ಯಾಯ ನಡೆಸುವುದಾಗಿ ತೀರ್ಮಾನಿಸಲಾಯಿತು. ಕೊರೋನಾ ವೈರಸ್ ವ್ಯಾಪಕವಾಗಿ ಹೆಚ್ಚುತ್ತಿರುವುದರಿಂದ ಭಕ್ತಾದಿಗಳು ಪರ್ಯಾಯ ಮಹೋತ್ಸವವನ್ನು ದೂರದರ್ಶನದಲ್ಲಿ ನೇರಪ್ರಸಾರದ ಮೂಲಕ ವೀಕ್ಷಿಸಿ ಕೋರೋನಾ ನಿಯಂತ್ರಣಕ್ಕೆ ಸಹಕರಿಸಬೇಕಾಗಿ ವಿನಂತಿ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಪೋಲಿಸ್ ವರಿಷ್ಠಾಧಿಕಾರಿಗಳಾದ ಎನ್ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಹಾಗೂ ಪರ್ಯಾಯೋತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
