ಕೌಟುಂಬಿಕ ಕಲಹ : ಸಬ್ ಇನ್ಸ್‌ಪೆಕ್ಟರ್  ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

Featured, ರಾಜ್ಯ ನ್ಯೂಸ್

ಕೌಟುಂಬಿಕ ಕಲಹ : ಸಬ್ ಇನ್ಸ್‌ಪೆಕ್ಟರ್  ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ  ಬೇಸತ್ತು ಸಬ್ ಇನ್ಸ್‌ಪೆಕ್ಟರ್  ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು  ಜಿಲ್ಲೆಯ ಕಡೂರು ತಾಲೂಕಿನ ಬೀರೂರಲ್ಲಿ ನಡೆದಿದೆ.

ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮ (34) ಮಂಗಳವಾರ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್ ಹಾಗೂ ಪದ್ಮ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದರು.

ಇದನ್ನೂ ಓದಿ: 

ದಕ್ಷಿಣ ಕನ್ನಡ : ಕರಾವಳಿಯಲ್ಲಿ ಏರುತ್ತಿರುವ ತಾಪಮಾನ; ಬಿಸಿಲಾಘಾತದ ಆತಂಕ – vishwanews24

ಸದ್ಯ ಪದ್ಮ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲೇ ಇದ್ದು, ಪೊಲೀಸರು ಪದ್ಮ ಕುಟುಂಬಸ್ಥರ ಬರುವಿಕೆಗಾಗಿ ಕಾಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದೆ.

Leave a Reply