ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ : ಸರ್ಕಾರದಿಂದ ಅಧಿಕೃತ  ಆದೇಶ – Vishwanews24

Featured, ರಾಜ್ಯ ನ್ಯೂಸ್

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ: ಸರ್ಕಾರದಿಂದ ಅಧಿಕೃತ  ಆದೇಶ

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ  ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ.

ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು.

ಕಾಂಗ್ರೆಸ್ ನ ದುರಾಡಳಿತದಿಂದ ಭಾರತ ಒಂದು ಚೂರು ಪ್ರಗತಿ ಕಂಡಿಲ್ಲ : ಜಗದೀಶ್ ಶೆಟ್ಟರ್ ವಾಗ್ದಾಳಿ – Vishwanews24

ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.

Leave a Reply