ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ – vishwanews24

Featured, ರಾಷ್ಟ್ರ ನ್ಯೂಸ್

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ಮುಂಬಯಿ: ‘ಲಗಾನ್’ ಮತ್ತು ‘ಗಜನಿ’ ಸೇರಿದಂತೆ ಹಲವು ಬ್ಲಾಕ್‌ಬಸ್ಟರ್ ಸಿನಿಮಾಗಳಲ್ಲಿ ಅಭಿನಯಿಸಿದ್ದ ಖ್ಯಾತ ನಟ ಪ್ರದೀಪ್ ರಾವತ್ (74) ಅವರು ಮಂಗಳವಾರ (ಆ.04) ನಿಧನ ಹೊಂದಿದ್ದಾರೆ.

‘ಲಗಾನ್’ ಚಿತ್ರದಲ್ಲಿ ಅವರೊಂದಿಗೆ ಅಭಿನಯಿಸಿದ್ದ ನಟ ಯಶ್‌ಪಾಲ್ ಶರ್ಮಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಈ ದುಃಖದ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಪ್ರದೀಪ್ ರಾವತ್ ಅವರ ಮ್ಯಾನೇಜರ್ ಸಿದ್ಧಾರ್ಥ್ ತಿವಾರಿ ಅವರ ನಿಧನವನ್ನು ದೃಢಪಡಿಸಿದ್ದಾರೆ. ಪ್ರದೀಪ್ ಅವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆಯ ನಂತರ ರೋಗವು ಮರಳಿ ಕಾಣಿಸಿಕೊಂಡಿತ್ತು. ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಅವರು ಹಿಂದಿ, ತೆಲುಗು, ತಮಿಳು, ಕನ್ನಡ, ಮಲಯಾಳಂ, ಬಂಗಾಳಿ ಮತ್ತು ಭೋಜ್‌ಪುರಿ ಭಾಷೆಗಳ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದರು.

Leave a Reply