ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ: ಪರಮೇಶ್ವರ್ – vishwanews24
ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ: ಪರಮೇಶ್ವರ್
ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಸುಳಿವು ಸಿಕ್ಕಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿ
ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಪ್ರತಿಮಾ ಕೊಲೆ ಪ್ರಕರಣದಲ್ಲಿ ಪೊಲೀಸರು ಆಕ್ಟೀವ್ ಆಗಿದ್ದಾರೆ. ಕೊಲೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ಅದರ ಆಧಾರದಲ್ಲಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತನಿಖೆ ಮಾಡಿದ ಬಳಿಕ ಕೊಲೆಗೆ ಕಾರಣ ಏನು?. ಹಿಂದೆ ಮುಂದೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು.
ಈಗಲೇ ಏನು ಹೇಳೋಕೆ ಆಗೋದಿಲ್ಲ. ಘಟನೆ ಸಂಬಂಧ ಸಿಕ್ಕಿರೋ ಲೀಡ್ ಪ್ರಕಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಂದು ಬಾರಿ ಆರೋಪಿಯನ್ನ ಬಂಧನ ಮಾಡಿದ ಮೇಲೆ ಎಲ್ಲವೂ ಹೊರಗೆ ಬರಲಿದೆ ಅಂತ ತಿಳಿಸಿದರು.
