ಗುಜರಾತ್‍ನ 17ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ -Vishwanews24

Featured, ರಾಷ್ಟ್ರ ನ್ಯೂಸ್

ಗುಜರಾತ್‍ನ 17ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ -Vishwanews24

ಅಹಮಾದಾಬಾದ್: ಗುಜರಾತ್‍ನ 17ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ದೇವರ ಹೆಸರಿನಲ್ಲಿ ಇಂದು ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ವಚನ ಆಚಾರ್ಯ ದೇವವ್ರತ್ ಪ್ರಮಾಣವಚನ ಬೋಧಿಸಿದರು.

ನಿರ್ಗಮಿತ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಶಾಸಕಾಂಗ ಸಭೆಯಲ್ಲಿ ಭೂಪೇಂದ್ರ ಪಟೇಲ್ ಹೆಸರನ್ನು ಆಯ್ಕೆ ಮಾಡಲಾಯಿತ್ತು. ಇಂದು ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ನರೇಂದ್ರ ಸಿಂಗ್ ತೋಮರ್, ಮನ್ಸೂಕ್ ಮಾಂಡವ್ಯ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾನ್, ಹರಿಯಾಣ ಸಿಎಂ ಮನೋಹರಲಾಲ್ ಕಟ್ಟರ್ ಸೇರಿ ಗುಜರಾತ್ ಹಲವು ಪ್ರಮುಖ ನಾಯಕರು ಭಾಗಿಯಾಗಿದ್ದರು