ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ : 15 ಕ್ಷೇತ್ರಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು – Vishwanews24
ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ : 15 ಕ್ಷೇತ್ರಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು
ನವದೆಹಲಿ : ಇಂದು ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆದ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.
ಗುಜರಾತ್ ವಿಧಾನಸಭೆ ಚುನಾವಣೆಯ ಮತಗಳ ಎಣಿಕೆ ಕಾರ್ಯ ನಡೆಯುತ್ತಿದ್ದು, ಬಿಜೆಪಿ ಬರೋಬ್ಬರಿ 151 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಈಗಾಗಲೇ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ, ಆಪ್ ಆದ್ಮಿ ಪಕ್ಷ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
