ಗೋವಾ: 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ – Vishwanews24

Featured, ರಾಷ್ಟ್ರ ನ್ಯೂಸ್

ಗೋವಾ: 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ

ಗೋವಾ : ಗೋವಾದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಶಾಕ್‌ ಎದುರಾಗಿದ್ದು 8 ಶಾಸಕರು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದ್ದಾರೆ ಎಂದು ಕಾಂಗ್ರೆಸ್ನ ಮಾಜಿ ಶಾಸಕ ಮೈಕೆಲ್ ಲೋಬೊ ದೃಢಪಡಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಸಿಎಂ ಪ್ರಮೋದ್ ಸಾವಂತ್ ಸಮ್ಮುಖದಲ್ಲಿ ದಿಗಂಬರ ಕಾಮತ್, ಮೈಕಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಲ್ದೇಸಾಯಿ, ಕೇದಾರ್ ನಾಯ್ಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ, ರುಡಾಲ್ಫ್ ಫರ್ನಾಂಡಿಸ್ ಸೇರಿದಂತೆ 8 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ನ ಎಲ್ಲಾ ಶಾಸಕರು ಪ್ರಧಾನಿ ಮೋದಿ ಅವರ ಕೈಗಳನ್ನು ಬಲಪಡಿಸಲು ಪ್ರಯತ್ನಿಸುತ್ತಾರೆ ಎಂದು ಲೋಬೋ ಬಿಜೆಪಿಗೆ ಸೇರುವ ಸಂದರ್ಭದಲ್ಲಿ ಹೇಳಿದರು.

ಉಡುಪಿ : ಮರ ಕಡಿಯುತ್ತಿದ್ದ ವೇಳೆ , ಮೈಮೇಲೆ ಮರ ಬಿದ್ದು ಯುವಕ ಸಾವು – Vishwanews24

Leave a Reply