ಗೋ ಸಾಗಾಟದ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣ : ತಲೆ ಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ರಾಜಸ್ಥಾನದಲ್ಲಿ ಬಂಧನ – Vishwanews24

Featured, ರಾಜ್ಯ ನ್ಯೂಸ್

ಗೋ ಸಾಗಾಟದ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣ : ತಲೆ ಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ರಾಜಸ್ಥಾನದಲ್ಲಿ ಬಂಧನ

ರಾಮನಗರ: ಗೋ ಸಾಗಾಟದ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿ ಪುನೀತ್ ಕೆರೆಹಳ್ಳಿ  ಸೇರಿ ಐವರನ್ನು ಸಾತನೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 31 ರಂದು ಕನಕಪುರ ತಾಲೂಕಿನ ಸಾತನೂರು ಬಳಿ ಅಕ್ರಮ ಗೋ ಸಾಗಣಿಕೆ ನಡೆಯುತ್ತಿತ್ತು. ಈ ವೇಳೆ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಕ್ಯಾಂಟರ್ ತಡೆದು ಜಾನುವಾರು ರಕ್ಷಣೆ ಮಾಡಿದ್ದರು. ಈ ವೇಳೆ ಕ್ಯಾಂಟರ್‌ನಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದರು. ಮೃತನನ್ನು ಮಂಡ್ಯ ಮೂಲದ ಇದ್ರಿಷ್ ಪಾಷಾ ಎಂದು ಗುರುತಿಸಲಾಗಿತ್ತು. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು.

ಪುನೀತ್ ಕೆರೆಹಳ್ಳಿ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 34 ರ ಅಡಿ ಕೇಸ್ ದಾಖಲಾಗಿತ್ತು. ಆದರೆ ಪುನೀತ್ ಕೆರೆಹಳ್ಳಿ ಹಾಗೂ ಆತನ ತಂಡ ಕಳೆದ ಐದು ದಿನದಿಂದ ತಲೆ ಮರೆಸಿಕೊಂಡಿದ್ದರು. ಆದರೆ ಪ್ರಕರಣದ ತನಿಖೆ ಆರಂಭಿಸಿದ್ದ ಸಾತನೂರು ಪೊಲೀಸರು ಪುನೀತ್ ಕೆರೆಹಳ್ಳಿ ಮತ್ತು ಆತನ ತಂಡವನ್ನು ರಾಜಸ್ಥಾನದಲ್ಲಿ ವಶಕ್ಕೆ ಪಡೆಯಲಾಯಿತು.

Leave a Reply