ಗೌರಿ ಹತ್ಯೆ ಕೇಸ್: ಕರಾವಳಿ ಮೂಲದ ಇಬ್ಬರು ಎಸ್ಐಟಿ ವಶಕ್ಕೆ
ಉಡುಪಿ: ಪತ್ರಕರ್ತೆ ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಾವಳಿ ಮೂಲದ ಇಬ್ಬರನ್ನು ಎಸ್ಐಟಿ ಅಧಿಕಾರಿಗಳು ಉಡುಪಿಯ ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಸ್ಥಳೀಯ ಪೊಲೀಸರ ಸಹಾಯ ಪಡೆದು, ಮನೆಯಲ್ಲಿದ್ದ ಇಬ್ಬರನ್ನು ಎಸ್ಐಟಿ ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಸಂದೇಶ್ ಶೆಟ್ಟಿ ಪಾದೆಬೆಟ್ಟು (28) ಹಾಗೂ ಯುವರಾಜ್ ಕಂಚಿನಡ್ಕ (30) ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳು ಹಿಂದೂ ಜಾಗರಣ ವೇದಿಕೆಯ ಪಡುಬಿದ್ರಿ ಹಾಗೂ ಕಾಪು ಸಂಘಟನೆಯ ಪ್ರಮುಖರು ಎನ್ನಲಾಗ್ತಿದೆ.
ಎಸ್ಐಟಿ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗಾಗಿ ಬೆಂಗಳೂರಿಗೆ ಕರೆತಂದು, ತನಿಖೆ ನಡೆಸುತ್ತಿದ್ದಾರೆ. ಇನ್ನು ಬಂಧಿತರು ಗೌರಿ ಹತ್ಯೆ ಪ್ರಕರಣದ ಆರೋಪಿಗಳೊಂದಿಗೆ ಲಿಂಕ್ ಹೊಂದಿದ್ದರು ಎಂಬ ಆರೋಪ ಕೇಳಿ ಬಂದಿದೆ.
