ಚನ್ನಪಟ್ಟಣ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಮತ್ತೆ ಗೆದ್ದು ಎನ್ಡಿಎ ಭಾಗವಾಗುತ್ತೇನೆ : ಯೋಗೇಶ್ವರ್ – vishwanews24
ಚನ್ನಪಟ್ಟಣ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಮತ್ತೆ ಗೆದ್ದು ಎನ್ಡಿಎ ಭಾಗವಾಗುತ್ತೇನೆ : ಯೋಗೇಶ್ವರ್
ಬೆಂಗಳೂರು: ಚನ್ನಪಟ್ಟಣ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಉಪಚುನಾವಣೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಪಕ್ಷೇತರನಾಗಿ ಮತ್ತೆ ಗೆದ್ದು ಎನ್ಡಿಎ ಭಾಗವಾಗುತ್ತೇನೆ. ಏನೇನು ರಾಜಕೀಯ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಮುಂದೆ ನೋಡೋಣ ಎಂದು ತಿಳಿಸಿದರು.
ಮಂಗಳೂರು: ಮಣ್ಣು ತೆರವು ಕಾರ್ಯ ; ಕೆಲವು ರೈಲು ಸಂಚಾರ ರದ್ದು – vishwanews24
ನನ್ನ ತಾಲೂಕಿನ ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯಾವುದೇ ಚಿನ್ಹೆಯ ಅಡಿ ನಿಂತರೂ ಗೆಲ್ಲಿಸುತ್ತಾರೆ. ಕ್ಷೇತ್ರದ ಸಮಾನ ಮನಸ್ಕ ವೇದಿಕೆಯಿಂದಲೂ ಸ್ಪರ್ಧೆಗೆ ಒತ್ತಾಯ ಇದೆ ಎಂದರು.
ನಾನು ಕಾಂಗ್ರೆಸ್ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿಕೆಶಿ ಅವರು ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಅಂತ ಗೊತ್ತಿದೆ ಎಂದು ಹೇಳಿದರು.
