ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ :ಐವರು ದುರ್ಮರಣ – vishwanews24
ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ :ಐವರು ದುರ್ಮರಣ
ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾದ ಪರಿಣಾಮ ಐವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ನಡೆದಿದೆ.
ಚಳ್ಳಕೆರೆ ಮೂಲದ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ, ಪ್ರಮೋದ್ ಸ್ಥಳದಲ್ಲೇ ಮೃತಪಟ್ಟವರು.
ಇದನ್ನೂ ಓದಿ:
ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್ – vishwanews24
ಕಾರಿನಲ್ಲಿ ಬಳ್ಳಾರಿಯಿಂದ ಚಳ್ಳಕೆರೆಗೆ ಆಗಮಿಸ್ತಿದ್ದು, ಚಳ್ಳಕೆರೆ ಛಾಯಾಗ್ರಾಹಕರ ಸಂಘದ ಸಹ ಕಾರ್ಯದರ್ಶಿ ರಾಘವೇಂದ್ರ ಸೇರಿದಂತೆ ಐವರು ಬಳ್ಳಾರಿಗೆ ಕಾರಿನಲ್ಲಿ ತೆರಳಿದ್ದರು. ಈ ವೇಳೆ ಅತಿ ವೇಗದಿಂದಾಗಿ ಕಾರಿನ ಟೈಯರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಮೊಳಕಾಲ್ಮುರು ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದರು. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಇದನ್ನೂ ಓದಿ:
ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್ – vishwanews24
