ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

Featured, ರಾಜ್ಯ ನ್ಯೂಸ್

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ

ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ದರ ಇದೀಗ ದಾಖಲೆಯ ಮಟ್ಟ ತಲುಪಿದ್ದು, ಬೆಂಗಳೂರಿನಲ್ಲಿ ಒಂದು ಕೆಜಿ ಬಾಯ್ಲರ್ ಚಿಕನ್ ಬೆಲೆ 360 ರೂಪಾಯಿಗೆ ಹಾಗೂ ಒಂದು ಮೊಟ್ಟೆಯ ಚಿಲ್ಲರೆ ದರ 9 ರೂಪಾಯಿಗೆ ಏರಿಕೆಯಾಗಿದೆ.

ಮಾರುಕಟ್ಟೆಯ ಮಾಹಿತಿ ಪ್ರಕಾರ, ಚರ್ಮವಿಲ್ಲದ ಬಾಯ್ಲರ್ ಚಿಕನ್ ಪ್ರತಿ ಕೆಜಿಗೆ 360 ರೂಪಾಯಿ ಹಾಗೂ ಚರ್ಮ ಸಮೇತ  ಚಿಕನ್ ಪ್ರತಿ ಕೆಜಿಗೆ 340 ರೂಪಾಯಿಗೆ ಮಾರಾಟವಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ 300 ರೂಪಾಯಿ ಆಸುಪಾಸಿನಲ್ಲಿದ್ದ ಚಿಕನ್ ಬೆಲೆ ಈಗ 350ರಿಂದ 360 ರೂಪಾಯಿವರೆಗೆ ಏರಿಕೆಯಾಗಿದೆ.

ಒಂದು ತಿಂಗಳೊಳಗೆ ಭಾರತ್‌ ಜೋಡೋ ಯುವ ಸಂಘಗಳು ಅಸ್ತಿತ್ವಕ್ಕೆ: ಪರಮೇಶ್ವರ್‌ – vishwanews24

ಮೊಟ್ಟೆ ದರವೂ ಇದೇ ರೀತಿ ಏರಿಕೆ ಕಂಡಿದೆ. ಸಗಟು ಮಾರುಕಟ್ಟೆಯಲ್ಲಿ ಒಂದು ಮೊಟ್ಟೆ 8 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ 8.30 ರಿಂದ 9 ರೂಪಾಯಿವರೆಗೆ ಮಾರಾಟವಾಗುತ್ತಿದೆ. ಮೂರು ದಿನಗಳ ಹಿಂದಷ್ಟೇ 7ರಿಂದ 7.50 ರೂಪಾಯಿ ಇದ್ದ ಮೊಟ್ಟೆ ಬೆಲೆ ಈಗ 9 ರೂಪಾಯಿಗೆ ತಲುಪಿರುವುದು ಗ್ರಾಹಕರಿಗೆ ಹೆಚ್ಚುವರಿ ಹೊರೆ ತಂದಿದೆ.

ವ್ಯಾಪಾರಿಗಳ ಪ್ರಕಾರ, ಈ ಬಾರಿ ಕೋಳಿಗಳ ಬೆಳವಣಿಗೆ ನಿರೀಕ್ಷಿತ ಮಟ್ಟದಲ್ಲಿ ಆಗದಿರುವುದು ಹಾಗೂ ಬೇರೆ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಕೋಳಿ ಪೂರೈಕೆಯಾಗುತ್ತಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಪೂರೈಕೆ ಕಡಿಮೆಯಾಗಿದೆ. ಇದರಿಂದ ಚಿಕನ್ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂದು ಅವರು ಹೇಳುತ್ತಾರೆ.

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಬೆಲೆ ಏರಿಕೆಯ ಪರಿಣಾಮ ಗ್ರಾಹಕರ ಖರೀದಿ ಪ್ರಮಾಣದಲ್ಲೂ ಬದಲಾವಣೆ ಕಂಡುಬಂದಿದೆ. ಈ ಹಿಂದೆ ಒಂದು ಕೆಜಿ ಚಿಕನ್ ಖರೀದಿಸುತ್ತಿದ್ದವರು ಈಗ 500 ಅಥವಾ 750 ಗ್ರಾಂ ಮಾತ್ರ ಖರೀದಿಸುತ್ತಿದ್ದಾರೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಹೆಚ್ಚಿದ ದರದ ಕಾರಣ ಗ್ರಾಹಕರ ಸಂಖ್ಯೆ ಕೂಡ ಕಡಿಮೆಯಾಗಿದೆ ಎನ್ನಲಾಗಿದೆ.

 

Leave a Reply