ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಿ : ಸಿದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಿ : ಸಿದ್ದರಾಮಯ್ಯ -Vishwanews24

ಬೆಂಗಳೂರು : ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು ಮಂದಿ ಸಾವಿಗೀಡಾಗಿರುವ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಸಿಎಂ BSY -Vishwanews24

“ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸುವೆ” ಎಂದು ಅವರು ಬರೆದು ಕೊಂಡಿದ್ದಾರೆ.

ಸಿದ್ದರಾಮಯಯ್ಯ ತಮ್ಮ ಟ್ವೀಟ್ ನಲ್ಲಿ ರಾಜ್ಯ ಸರ್ಕಾರವನ್ನು ಆರೋಪಿಸಿದ್ದು, ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಶಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ ಯಡಿಯೂರಪ್ಪನವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ಅವರು ಪ್ರಶ್ನಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲೇಟಿನ್ ಸ್ಫೋಟ : ಅಮಾಯಕ ಜೀವಗಳ ಬಲಿಗೆ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ : ಡಿ.ಕೆ. ಶಿ ಆರೋಪ -Vishwanews24

“ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು‌ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಯಡಿಯೂರಪ್ಪನವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ” ಎಂದು ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ಪ್ರಧಾನಿ ಮೋದಿ ಸಂತಾಪ -Vishwanews24