ಚಿಕ್ಕಮಗಳೂರು: 9ನೇ ತರಗತಿ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ – Vishwanews24

Featured, ರಾಜ್ಯ ನ್ಯೂಸ್

ಚಿಕ್ಕಮಗಳೂರು: 9ನೇ ತರಗತಿ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಿಕ್ಕಮಗಳೂರು: 9ನೇ ತರಗತಿ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು  ಜಿಲ್ಲೆ ಕೊಪ್ಪ ಪಟ್ಟಣದ ಖಾಸಗಿ ಶಾಲೆಯ ಹಾಸ್ಟೆಲ್‌ನಲ್ಲಿ ನಡೆದಿದೆ.

9ನೇ ತಗರತಿ ವ್ಯಾಸಂಗ ಮಾಡುತ್ತಿದ್ದ ಶ್ರೀನಿವಾಸ್ (15) ಮೃತ ವಿದ್ಯಾರ್ಥಿ. ಬಾಲಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶಾಲೆಯ 3ನೇ ಮಹಡಿಯಲ್ಲಿದ್ದ ಹಾಸ್ಟೆಲ್‌ನ ಮೇಲ್ಛಾವಣಿಯ ಕಬ್ಬಿಣದ ರಾಡಿಗೆ ಸೀರೆಯಿಂದ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾನೆ.

ಕಳೆದ ರಾತ್ರಿ ಊಟ ಮಾಡಿ ಸ್ನೇಹತರ ಜೊತೆಯೇ ಮಲಗಿದ್ದ ಶ್ರೀನಿವಾಸ್ ಬೆಳಗಿನ ಜಾವ 5 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಮಲಗಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ತಂದೆ ಸರ್ಕಾರಿ ನೌಕರರಾಗಿದ್ದು, ಕೊಪ್ಪ ತಾಲೂಕಿನಲ್ಲೇ ಕೆಲಸ ಮಾಡುತ್ತಿದ್ದರು. ಶಾಲೆ ಮನೆಯಿಂದ ತುಸು ದೂರದಲ್ಲೇ ಇತ್ತು. ಮೃತ ಬಾಲಕ ನಿತ್ಯ ಓಡಾಕೊಂಡಿದ್ದನು. ಕಳೆದ ಒಂದು ತಿಂಗಳ ಹಿಂದೆ ಮೃತ ಶ್ರೀನಿವಾಸ್ ತಂದೆಗೆ ಕೊಪ್ಪದಿಂದ ಅಜ್ಜಂಪುರಕ್ಕೆ ವರ್ಗಾವಣೆಯಾಗಿತ್ತು. ಹಾಗಾಗಿ, ಶ್ರೀನಿವಾಸ್‌ನನ್ನ ಹಾಸ್ಟೆಲ್‌ಗೆ ಸೇರಿಸಿದ್ದರು.

ಉಡುಪಿ: ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಕ್ಲಬ್, ಪಬ್, ಮಟ್ಕಾ ದಂಧೆ ಕಡಿವಾಣಕ್ಕೆ ಜಿಲ್ಲಾ ಬಿಜೆಪಿ ಒತ್ತಾಯ – Vishwanews24

ಒಂದು ತಿಂಗಳಿನಿಂದ ಶಾಲೆಯ ಹಾಸ್ಟೆಲ್‌ನಲ್ಲಿದ್ದ ಶ್ರೀನಿವಾಸ್ ಮಂಗಳವಾರ ಬೆಳಗ್ಗಿನ ಜಾವ ಹಾಸ್ಟೆಲ್‌ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Leave a Reply