ಚಿತ್ರದುರ್ಗ ಬಸ್ ಅಪಘಾತ : PNRF ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ  ರೂ. ಪರಿಹಾರ: ಮೋದಿ ಸಂತಾಪ – vishwanews24

Featured, ರಾಜ್ಯ ನ್ಯೂಸ್, ರಾಷ್ಟ್ರ ನ್ಯೂಸ್

ಚಿತ್ರದುರ್ಗ ಬಸ್ ಅಪಘಾತ : PNRF ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ  ರೂ. ಪರಿಹಾರ: ಮೋದಿ ಸಂತಾಪ

ನವದೆಹಲಿ/ಬೆಂಗಳೂರು: ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಬರೆದುಕೊಂಡಿದ್ದಾರೆ.

ಮಂಗಳೂರು :  ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ ;  ಅದೃಷ್ಟವಶಾತ್ ಚಾಲಕ ಪಾರು – vishwanews24

Leave a Reply