ಚಿದಂಬರಂಗೆ ತೀವ್ರ ಹಿನ್ನಡೆ : ನಿರೀಕ್ಷಣಾ ಜಾಮೀನು ಅರ್ಜಿ ತಳ್ಳಿ ಹಾಕಿದ ಸುಪ್ರೀಂ ಕೋರ್ಟ್ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ :ಕೇಂದ್ರ ಸರ್ಕಾರದ ಮಾಜಿ ಹಣಕಾಸು ಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂಗೆ ಸುಪ್ರೀಂ ಕೋರ್ಟ್ ನಲ್ಲಿ ತೀವ್ರ ಹಿನ್ನಡೆಯಾಗಿದ್ದು, ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಳ್ಳಿ ಹಾಕಿದೆ.

ಪಿ.ಚಿದಂಬರಂ ಜಾಮೀನು ಅರ್ಜಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ಸಿಬಿಐ ಬಂಧನದಲ್ಲಿ ನೇರವಾಗಿ ಸುಪ್ರೀಂಗೆ ಜಾಮೀನಿಗಾಗಿ ಮನವಿ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಚಿದಂಬರಂಗೆ ಜಾಮೀನು ಅವಶ್ಯಕತೆ ಇದ್ದಲ್ಲಿ ಕೆಳಹಂತದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಅರ್ಜಿದಾರರ ಪರ ವಕೀಲರಿಗೆಸೂಚನೆ ನೀಡಿದ್ದಾರೆ.

ಸಿಬಿಐ ಬಂಧನವನ್ನ ಪ್ರಶ್ನಿಸಿ ಸಲ್ಲಿಕೆ ಮಾಡಲಾಗಿದ್ದ ಮತ್ತೊಂದು ಅರ್ಜಿಯ ಇಂದಿನ ವಿಚಾರಣೆಗೆ ನಮೂದಾಗಿರಲಿಲ್ಲ ಎಂದು ಕೋರ್ಟ್ ಹೇಳಿದೆ. ಈ ಮೂಲಕ ಎರಡೂ ಅರ್ಜಿಗಳಲ್ಲಿ ಚಿದಂಬರಂಗೆ ಭಾರೀ ಹಿನ್ನಡೆಯಾಗಿದೆ.