ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ : ಪ್ರಿಯಾಂಕ್ ಖರ್ಗೆ – Vishwanews24

Featured, ರಾಜ್ಯ ನ್ಯೂಸ್

ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ : ಪ್ರಿಯಾಂಕ್ ಖರ್ಗೆ – Vishwanews24

ಕಲಬುರಗಿ: ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಾಯ್ತಿ ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ. ದಿ.ರಾಜೀವ್‍ಗಾಂಧಿ ಅವರು ಪಂಚಾಯ್ತಿ ವ್ಯವಸ್ಥೆಯಲ್ಲಿ ಮೀಸಲಾತಿ ಜಾರಿಗೆ ತಂದರು. ಆದರೆ ಸಂವಿಧಾನದಲ್ಲಿ ಮೀಸಲಾತಿ ತಿದ್ದುಪಡಿ ಪ್ರಶ್ನಿಸಿ ಬಿಜೆಪಿ ಕೋರ್ಟ್ ಮೊರೆ ಹೋಗಿತ್ತು. ಬಿಜೆಪಿ ಅವರಿಗೆ ಮೀಸಲಾತಿ ಬಗ್ಗೆ ಆಸಕ್ತಿ ಇಲ್ಲ, ರಾಮಜೋಯಿಸ್ ರಿಟ್ ಪಿಟಿಷನ್ ಹಾಕಿದ್ದರು. ಬಿಜೆಪಿ ಬಂದ ಮೇಲೆ ಪಂಚಾಯತ್ ರಾಜ್ಯ ವ್ಯವಸ್ಥೆ ಬಿಜೆಪಿಯಿಂದ ಕೈತಪ್ಪಿದೆ ಎಂದು ಕಿಡಿಕಾರಿದರು.

ಸರ್ಕಾರ ಪಂಚಾಯ್ತಿ ಎಲೆಕ್ಷನ್ ಪ್ರತಿ ಐದು ವರ್ಷಕ್ಕೊಮ್ಮೆ ಕಡ್ಡಾಯವಾಗಿ ನಡೆಸಬೇಕು. ಚುನಾವಣೆ ವಿಚಾರದಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಕ್ಷೇತ್ರಗಳ ಪುನರ್ ವಿಂಗಡನೆ ಮಾಡಲು ಸರ್ಕಾರ ಮುಂದಾಗಿದ್ದು, ಚುನಾವಣೆ ಮುಂದೂಡಲು ಹುನ್ನಾರ ನಡೆಸಿದೆ. ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಮುಂದೂಡಲು ಸರ್ಕಾರ ಪ್ಲಾನ್ ಮಾಡಿದೆ. ಆದರೆ ಹೈಕೋರ್ಟ್ ತೀರ್ಪಿನ ಅನ್ವಯ ಚುನಾವಣೆ ನಡೆಯಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಸಾಧನೆ ಕೇವಲ ಪತ್ರಿಕೆಗಳಲ್ಲಿ ಮಾತ್ರ. ಜಿಲ್ಲೆಗೆ ಇದುವರೆಗೆ ಒಂದು ಉಸ್ತುವಾರಿ ಸಚಿವ ಸ್ಥಾನ ಸರ್ಕಾರ ನೀಡಿಲ್ಲ. ಬಿಜೆಪಿ ಏನೇ ಕುತಂತ್ರ ನಡೆಸಿದ್ರು ಕಾಂಗ್ರೆಸ್ ಅಭ್ಯರ್ಥಿ ಗೆಲುವು ಕಟ್ಟಿಟ್ಟ ಬುತ್ತಿಯಾಗಿದೆ. ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್ ಅಧಿಕಾರವಧಿಯಲ್ಲಿ ಏನೇನು ಕೆಲಸ ಮಾಡಿಲ್ಲ. ನಮ್ಮ ಅಭ್ಯರ್ಥಿ ಪಂಚಾಯ್ತಿ ರಾಜ್ ವ್ಯವಸ್ಥೆಯಿಂದ ಬಂದವರು, ಬಿಜೆಪಿ ಅಭ್ಯರ್ಥಿ ವ್ಯಾಪಾರದ ಹಿನ್ನೆಲೆಯಿಂದ ಬಂದವರು. ಅವರಿಗೆ ಪಂಚಾಯತ್ ರಾಜ್ ವ್ಯವಸ್ಥೆ ಬಗ್ಗೆ ಅರಿವಿಲ್ಲ ಎಂದು ಆರೋಪಿಸಿದರು.

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರ ಗೆಲುವಿಗೆ ಸಂಬಂಧಿಸಿ ಚುನಾವಣಾ ಪೂರ್ವ ಸಿದ್ಧತಾ ಸಭೆ – Vishwanews24