ಚೌಕಿದಾರ್ ಚೋರ್ ಹೈ ಹೇಳಿಕೆ :ಇಂಥ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಬೇಕು ರಾಹುಲ್ ಗೆ ಸುಪ್ರೀಂ ತರಾಟೆ -Vishwanews24
ನವದೆಹಲಿ: ಚೌಕಿದಾರ್ ಚೋರ್ ಹೈ” ಎಂಬ ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ಸಲ್ಲಿಸಲಾಗದ್ದ ನಿಂದನಾ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, “ರಾಹುಲ್ ಗಾಂಧಿ ಅವರು ಮಾತನಾಡುವಾಗ ಎಚ್ಚರಿಕೆಯಿಂದಿರಬೇಕು” ಎಂದಿದೆ
ಚೌಕಿದಾರ್ ಚೋರ್ ಹೈ ಎಂಬ ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ಸಲ್ಲಿಸಲಾಗಿದ್ದ ನಿಂದನಾ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಹುಲ್ ಗಾಂಧಿ ಅವರು ಮಾತನಾಡುವಾಗ ಎಚ್ಚರಿಕೆಯಿಂದಿರಬೇಕು ಎಂದು ಹೇಳಿದೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮಾಯಾಚನೆ ಅರ್ಜಿ ಸ್ವೀಕರಿಸಿದ ಸುಪ್ರೀಂ ಕೋರ್ಟ್, ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು ಇಂಥ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಬೇಕು ಎಂದು ತಿಳಿಸಿದೆ.
ರಾಹುಲ್ ಗಾಂಧಿಯ ಈ ಹೇಳಿಕೆಯ ವಿರುದ್ಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ನಿಂದನಾ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ಕುರಿತು ಇಂದು ಆದೇಶ ನೀಡಿದ ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿತು.
