ಜನರ ಕಲ್ಯಾಣ ನಮ್ಮ ಮೊದಲ ಆದ್ಯತೆ  , ನಾವು ಒಗ್ಗಟ್ಟಾಗಿ ಎಲ್ಲಾ ಭರವಸೆ ಈಡೇರಿಸುತ್ತೇವೆ : ಡಿಕೆಶಿ – Vishwanews24

Featured, ರಾಷ್ಟ್ರ ನ್ಯೂಸ್

ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ : ಸಿದ್ದರಾಮಯ್ಯ..

ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ‘ಸಿದ್ದರಾಮಯ್ಯ’, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಆಯ್ಕೆ ಆಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಘೋಷಣೆ ಮಾಡಿದ್ದು, ಈ ಮೂಲಕ ಸಿಎಂ ಆಯ್ಕೆ ಕಗ್ಗಂಟು ಸುಖಾಂತ್ಯಗೊಂಡಿದೆ.

ಈ ಘೋಷಣೆ ಬೆನ್ನಲ್ಲೇ ನಿಯೋಜಿತ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ಸುಭದ್ರ ಭವಿಷ್ಯ ಮತ್ತು ನಮ್ಮ ಜನರ ಕಲ್ಯಾಣ ನಮ್ಮ ಮೊದಲ ಆದ್ಯತೆಯಾಗಿದೆ . ನಾವು ಎಂದಿಗೂ ಒಗ್ಗಟ್ಟಾಗಿದ್ದೇವೆ, ಭರವಸೆ ಈಡೇರಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ,ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಜನತೆಗೆ ಸಂದೇಶ ರವಾನಿಸಿದ್ದಾರೆ.

ಬಿಜೆಪಿ ಮುಖಂಡರ ಫೋಟೋಗೆ ಚಪ್ಪಲಿ ಹಾರ ಪ್ರಕರಣ; ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿದ ನಳಿನ್ ಕುಮಾರ್ ಕಟೀಲ್ – VIshwanews24

Leave a Reply