ಜನವರಿ 14ರಿಂದ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಣಿಪುರ To ಮುಂಬೈ ಭಾರತ್ ನ್ಯಾಯ ಯಾತ್ರೆ – vishwanews24
ಜನವರಿ 14ರಿಂದ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಣಿಪುರ To ಮುಂಬೈ ಭಾರತ್ ನ್ಯಾಯ ಯಾತ್ರೆ
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಪಕ್ಷ ಇದೀಗ ದೇಶದ ಈಶಾನ್ಯ ಮತ್ತು ಪಶ್ಚಿಮ ರಾಜ್ಯಗಳನ್ನು ಸಂಪರ್ಕಿಸುವ ಯಾತ್ರೆ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಘೋಷಿಸಿದೆ. ಜನವರಿ 14ರಿಂದ ಮಣಿಪುರದಿಂದ ಮುಂಬೈವರೆಗೆ “ಭಾರತ್ ನ್ಯಾಯ ಯಾತ್ರೆ ನಡೆಯಲಿದೆ.
ಮಣಿಪುರದಿಂದ ಮುಂಬೈವರೆಗಿನ ಸುಮಾರು 6,200 ಕಿಲೋ ಮೀಟರ್ ದೂರದ ಈ ಯಾತ್ರೆ ಜನವರಿ 14ರಿಂದ ಆರಂಭಗೊಳ್ಳಲಿದ್ದು, ಮಾರ್ಚ್ 20ರಂದು ಕೊನೆಗೊಳ್ಳಲಿದೆ ಎಂದು ವರದಿ ತಿಳಿಸಿದೆ.
ಕಳೆದ ವರ್ಷ ರಾಹುಲ್ ಗಾಂಧಿ ದಕ್ಷಿಣ ಮತ್ತು ಉತ್ತರದ ರಾಜ್ಯಗಳನ್ನು ಸಂಪರ್ಕಿಸುವ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದು, ಇದರ ಪರಿಣಾಮ ದಕ್ಷಿಣದ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲಾಭ ತಂದುಕೊಟ್ಟಿರುವುದಾಗಿ ವರದಿ ವಿಶ್ಲೇಷಿಸಿದೆ.
ಇಂದು ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆ ಇಲ್ಲ : ಡಿ.ವಿ. ಸದಾನಂದ ಗೌಡ – vishwanews24
ಭಾರತ್ ನ್ಯಾಯ ಯಾತ್ರೆಯ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿರುವ ಬಿಜೆಪಿ, ಜನರು ಭಾರತ್ ಜೋಡೋ ಯಾತ್ರೆಯನ್ನು ತಿರಸ್ಕರಿಸಿರುವುದಾಗಿ ಟೀಕಿಸಿದೆ.
ಭಾರತ್ ನ್ಯಾಯ ಯಾತ್ರೆಗೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಇಂಫಾಲ್ ನಲ್ಲಿ ಹಸಿರು ನಿಶಾನೆ ಮೂಲಕ ಚಾಲನೆ ನೀಡಲಿದ್ದು, ರಾಹುಲ್ ಗಾಂಧಿ ನೇತೃತ್ವದ ಈ ಯಾತ್ರೆಯು 14 ರಾಜ್ಯಗಳ 85 ಜಿಲ್ಲೆಗಳಲ್ಲಿ ಹಾದು ಹೋಗಲಿದೆ ಎಂದು ವರದಿ ತಿಳಿಸಿದೆ.
ಕಾಂಗ್ರೆಸ್ ಪಕ್ಷದ ಭಾರತ್ ನ್ಯಾಯ ಯಾತ್ರೆಯು ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಛತ್ತೀಸ್ ಗಢ್, ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ್, ಗುಜರಾತ್ ಮತ್ತು ಮಹಾರಾಷ್ಟ್ರ ಒಳಗೊಂಡಿರುವುದಾಗಿ ತಿಳಿಸಿದೆ.
ಬೆಂಗಳೂರು : ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ : ಈ ನಿಯಮಗಳ ಪಾಲನೆ ಕಡ್ಡಾಯ – vishwanews24
ಭಾರತ್ ನ್ಯಾಯ ಯಾತ್ರೆಯು ದೇಶದ ಜನರಿಗೆ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನ್ಯಾಯವನ್ನು ಖಾತರಿಪಡಿಸುವುದಾಗಿದೆ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ
