ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ ವೇಳೆ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ – Vishwanews24
ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ ವೇಳೆ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ – Vishwanews24
ಶ್ರೀನಗರ: ನಗರದ ಹೊರವಲಯದ ರಂಗ್ರೆತ್ ಪ್ರದೇಶದಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ರಂಗ್ರೆತ್ ಪ್ರದೇಶದಲ್ಲಿ ಭದ್ರತಾ ಪಡೆಗಳಿಂದ ಶೋಧಕಾರ್ಯ ನಡೆಯಿತು.
Jammu and Kashmir | Two terrorists neutralised in an ongoing operation in the Rangret area of Srinagar
(Visuals deferred by unspecified time) pic.twitter.com/5GDrWPGwWN
— ANI (@ANI) December 13, 2021
ಕಾರ್ಯಾಚರಣೆ ಸಂದರ್ಭದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದರು. ಇದಕ್ಕೆ ಭದ್ರತಾ ಪಡೆಗಳಿಂದ ಪ್ರತಿದಾಳಿ ನಡೆಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಭಾರತೀಯ ಸೇನೆಯ 42ನೇ ರಾಷ್ಟ್ರೀಯ ರೈಫಲ್ ಮತ್ತು ಕೇಂದ್ರೀಯ ಮೀಸಲು ಪಡೆ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದರು. ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಿ, ಜೈಷ್ ಇ ಮೊಹಮ್ಮದ್ ಸಂಘಟನೆಯ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿತ್ತು. ಮೊದಲು ಉಗ್ರನನ್ನು ವಶಕ್ಕೆ ಪಡೆಯಲಾಯಿತು. ಆದರೆ ಆತ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಯತ್ನಿಸಿದಾಗ ಅವನನ್ನು ಕೊಲ್ಲಲಾಯಿತು ಎಂದು ಪೊಲೀಸರು ಹೇಳಿದ್ದಾರೆ.
