ಜಲಾಶಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಬೇಕು: ಎಂ.ಬಿ.ಪಾಟೀಲ್ – Vishwanews24

Featured, ರಾಜ್ಯ ನ್ಯೂಸ್

ಜಲಾಶಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಬೇಕು: ಎಂ.ಬಿ.ಪಾಟೀಲ್ – Vishwanews24

ಬೆಂಗಳೂರು: ಯಾವುದೇ ಆಣೆಕಟ್ಟು ಸುತ್ತಮುತ್ತ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯಬಾರದು. ಕೆಆರ್ ಎಸ್ ಪುರಾತನ ಜಲಾಶಯ. ಜಲಾಶಯದ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಸುದ್ದಗಾರರೊಂದಿಗೆ ಅವರು ಮಾತನಾಡಿದರು.

ಅಂಬರೀಶ್ ಕಾಲದಲ್ಲೇ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು ಎಂಬ ಜೆಡಿಎಸ್ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಂಬರೀಶ್ ನನ್ನ ಸ್ನೇಹಿತ, ಇಬ್ಬರ ನಡುವೆ ಒಳ್ಳೆ ಸ್ನೇಹ ಇತ್ತು. ಸುಮಲತಾ ಅವರ ಬಗ್ಗೆಯೂ ಅಪಾರ ಗೌರವ ಇದೆ. ಅಕ್ರಮ ಗಣಿಗಾರಿಕೆ ವಿಚಾರವಾಗಿ ನನಗೆ ಗೊತ್ತಿಲ್ಲ ಎಂದರು.

ಕೆಆರ್ ಎಸ್ ಸೇರಿದಂತೆ ರಾಜ್ಯದ ಹಲವು ಡ್ಯಾಂಗಳ ಆಧುನೀಕರಣಕ್ಕೆ ನಾನು‌ ಜಲಸಂಪನ್ಮೂಲ ಸಚಿವನಾಗಿದ್ದಾಗ ಅನುಮತಿ ಸಿಕ್ಕಿತ್ತು. ಉಮಾ ಭಾರತಿ ಅವರು ಆಗ ಕೇಂದ್ರ ಜಲಸಂಪನ್ಮೂಲ ಸಚಿವೆಯಾಗಿದ್ದರು. ಆಗ ವಿಶ್ವ ಬ್ಯಾಂಕ್ ನೆರವಿನೊಂದಿಗೆ ಡ್ಯಾಂಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿತ್ತು ಎಂದು ಮಾಹಿತಿ ನೀಡಿದರು.