ಜಾಗತಿಕವಾಗಿ ವ್ಯಾಪಿಸಿರುವ ಭಯೋತ್ಪಾದನೆಗೆ ಬೆಂಬಲ ನೀಡುವ ಎಲ್ಲಾ ಮಾರ್ಗಗಳನ್ನು ಬಂದ್ ಮಾಡಬೇಕಿದೆ : ಪ್ರಧಾನಿ ಮೋದಿ -Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಒಸಾಕಾ(ಜಪಾನ್‌): ‘ಜಾಗತಿಕವಾಗಿ ವ್ಯಾಪಿಸಿರುವ ಭಯೋತ್ಪಾದನೆಯು ಮಾನವೀಯತೆಗೆ ಬಹು ದೊಡ್ಡ ಅಪಾಯಕಾರಿಯಾಗಿದೆ’ ಎಂದು ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಯೋತ್ಪಾದನೆ ಮಟ್ಟ ಹಾಕಲು ಎಲ್ಲರೂ ಕೈಜೋಡಿಸುವಂತೆ ವಿಶ್ವ ನಾಯಕರಿಗೆ ಕರೆ ನೀಡಿದ್ದಾರೆ.

28–29ರಂದು ಇಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗಾಗಿ ಮೋದಿ ಅವರು ಜಪಾನ್‌ಗೆ ಭೇಟಿ ಕೊಟ್ಟಿದ್ದು, ಶೃಂಗಸಭೆಗೂ ಮುನ್ನ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಪ್ರಂಪ್‌ ಸೇರಿದಂತೆ ವಿವಿಧ ರಾಷ್ಟ್ರ ನಾಯಕರ ಜತೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ.

ಭಯೋತ್ಪಾದನೆ ಅಮಾಯಕರ ಬದುಕನ್ನೇ ಕಿತ್ತುಕೊಳ್ಳುವುದು ಮಾತ್ರವಲ್ಲ, ಇದು ಆರ್ಥಿಕ ಬೆಳವಣಿಗೆ ಮತ್ತು ಕೋಮು ಸೌಹಾರ್ದದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ. ಭಯೋತ್ಪಾದನೆ ಮತ್ತು ವರ್ಣಭೇದ ನೀತಿಗೆ ಬೆಂಬಲ ನೀಡುವ ಎಲ್ಲಾ ಮಾರ್ಗಗಳನ್ನು ಬಂದ್ ಮಾಡಬೇಕಿದೆ ಎಂದು ಎಚ್ಚರಿಸಿದರು.

ಅಭಿವೃದ್ಧಿಯನ್ನು ಸುಸ್ಥಿರಗೊಳಿಸಿ ಎಲ್ಲರನ್ನೂ ಒಳಗೊಳ್ಳಿಸುವುದು ಮತ್ತೊಂದು ಸವಾಲು. ಡಿಜಿಟಲೀಕರಣದಂತಹ ತ್ವರಿತವಾಗಿ ಬದಲಾಗುತ್ತಿರುವ ತಂತ್ರಜ್ಞಾನಗಳು, ಹವಾಮಾನ ಬದಲಾವಣೆಯ ಸವಾಲುಗಳು ವರ್ತಮಾನದಲ್ಲಿ ಮಾತ್ರವಲ್ಲ ಭವಿಷ್ಯದ ತಲೆಮಾರುಗಳಿಗೂ ಅಪಾಯ ತಂದೊಡ್ಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.