ಜಿಲ್ಲೆಯಲ್ಲಿ  ಏ.16 ರಿಂದ 30 ರವರೆಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ :  ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

Featured, ಉಡುಪಿ

ಜಿಲ್ಲೆಯಲ್ಲಿ  ಏ.16 ರಿಂದ 30 ರವರೆಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ :  ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ಜಿಲ್ಲೆಯಲ್ಲಿ 1-19 ವರ್ಷದ ಒಳಗಿನ ಪ್ರತಿಯೊಬ್ಬರಿಗೂ ಜಂತುಹುಳು ನಿವಾರಣಾ ಮಾತ್ರೆಯನ್ನು ಏಪ್ರಿಲ್ 16 ರಿಂದ 30 ರವರೆಗೆ ಮನೆ ಮನೆಗೆ ಭೇಟಿ ನೀಡಿ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು ಇಂದು ನಗರದ ತಮ್ಮ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಂತುಹುಳುಗಳು ದೇಹ ಪೌಷ್ಠಿಕಾಂಶಗಳನ್ನು ಬಳಸುವುದನ್ನು ಅಡ್ಡಿ ಪಡಿಸುವುದರಿಂದ ರಕ್ತಹೀನತೆ, ಅಪೌಷ್ಠಿಕತೆ, ದುರ್ಬಲ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕಾರಣವಾಗುತ್ತದೆ. ಈ ಹಿನ್ನಲೆಯಲ್ಲಿ ಜಂತುಹುಳುಗಳ ಬಾಧೆ ತಪ್ಪಿಸಲು ಸರ್ಕಾರ ಜಂತುಹುಳು ನಿವಾರಣಾ ಮಾತ್ರೆಯನ್ನು ವಿತರಿಸಲಾಗುತ್ತದೆ ಎಂದರು.

ಇದನ್ನೂ ಓದಿ :ಉಡುಪಿ: ಕೊರೊನಾ ಸೋಂಕು ಹೆಚ್ಚಳ ; ಎಂಐಟಿ ಕ್ಯಾಂಪಸ್‌ ಸೀಲ್‌ಡೌನ್ : ಕೆ.ಸುಧಾಕರ್ -Vishwanews24

ಜಿಲ್ಲೆಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಡಿಯಲ್ಲಿ ಆಲ್ಬೆಂಡಝೋಲ್ ಮಾತ್ರೆಗಳನ್ನು ವಿತರಿಸಲು 1,36,013 ಗಂಡು ಮಕ್ಕಳು, 1,35,029 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 2,71,042 ಮಕ್ಕಳನ್ನು ಗುರುತಿಸಲಾಗಿದೆ ಎಂದರು.
ಕಳೆದ ಸಾಲಿನಲ್ಲಿ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಲ್ಲಿ ಈ ಮಾತ್ರೆಗಳನ್ನು ವಿತರಿಸಲಾಗುತ್ತಿತ್ತು. ಆದರೆ ಈ ಬಾರಿ ಕೋವಿಡ್-19 ನಿಂದಾಗಿ ಶಾಲಾ- ಕಾಲೇಜುಗಳ ರಜಾದಿಂದಾಗಿ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕರ್ಯಕರ್ತೆಯರೂ ನೇರವಾಗಿ ಮನೆ ಮನೆಗೆ ತೆರಳಿ ಮಾತ್ರೆಗಳನ್ನು ಅವರ ಸಮ್ಮುಖದಲ್ಲಿ ನೀಡಲಿದ್ದಾರೆ ಎಂದರು.

ಒ0ದರಿ0ದ ಎರಡು ವರ್ಷದ ಮಕ್ಕಳಿಗೆ ಅರ್ಧ ಮಾತ್ರೆಯನ್ನು ಪುಡಿ ಮಾಡಿ ಶುದ್ಧ ನೀರಿನಲ್ಲಿ ಬೆರಿಸಿ ಸೇವಿಸಬೇಕು. ಎರಡರಿಂದ –ಮೂರು ವರ್ಷದ ಮಕ್ಕಳಿಗೆ ಒಂದು ಪೂರ್ಣ ಮಾತ್ರೆಯನ್ನು ಪುಡಿ ಮಾಡಿ ಶುದ್ಧ ನೀರಿನಲ್ಲಿ ಬೆರೆಸಿ ನೀಡಬೇಕು. ಮೂರರಿಂದ -ಹತ್ತೊಂಭತ್ತು ವರ್ಷದ ಮಕ್ಕಳು ಒಂದು ಪೂರ್ಣ ಮಾತ್ರೆಯನ್ನು ಗಂಟಲಿನೊಳಗೆ ಸಿಕ್ಕಿ ಹಾಕಿಕೊಳ್ಳದಂತೆ ಅಗೆದು ನುಂಗುವAತೆ ನೋಡಿಕೊಳ್ಳಬೇಕು ಕುಡಿಯುವ ನೀರಿನ ಲಭ್ಯತೆ ಇರುವ ಹಾಗೆ ನೋಡಿಕೊಳ್ಳಬೇಕು ಎಂದರು.

ಇದನ್ನೂ ಓದಿ :ಉಳ್ಳಾಲ : ನೇತ್ರಾವತಿ ಸೇತುವೆಯಲ್ಲಿ ಕಾರು- ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ, ರಿಕ್ಷಾ ಚಾಲಕ ದಾರುಣ ಸಾವು -Vishwanews24

ಜಿಲ್ಲಾದ್ಯಂತ ಜಂತುಹುಳು ನಿವಾರಣಾ ಮಾತ್ರೆಯನ್ನು ವಿತರಿಸುವಾಗ ಕೋವಿಡ್ ಮಾರ್ಗಸೂಚಿಯನ್ನು ತಪ್ಪದೆ ಕಡ್ಡಾಯವಾಗಿ ಪಾಲಿಸಬೇಕು ಎಂದ ಅವರು ಕೋವಿಡ್ ಸೋಂಕಿತರಿದ್ದರೆ 8 ವಾರಗಳ ನಂತರ ಈ ಮಾತ್ರೆಗಳನ್ನು ನೀಡಲಾಗುವುದು ಎಂದರು.
ಜಂತುಹುಳು ಭಾದೆಯಿಂದ ದೂರವಿರಲು ಪ್ರತಿಯೊಬ್ಬರು ಪಾದರಕ್ಷೆ ಬಳಸಬೇಕು. ಶೌಚಾಲಯದ ಶುಚಿತ್ವ ಕಾಪಾಡಿಕೊಳ್ಳಬೇಕು ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದರು.

ಜಂತುಹುಳ ನಿವಾರಣಾ ಕಾರ್ಯಕ್ರಮದ ಅನುಷ್ಠಾನದ ಮೇಲ್ವಿಚಾರಣೆಯನ್ನು ತಾಲೂಕುಗಳಲ್ಲಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುಧೀರ್ ಚಂದ್ರ ಸೂಡಾ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಎಂ.ಜಿ ರಾಮ, ಜಿಲ್ಲಾ ಸರ್ಜನ್ ಮಧುಸೂದನ್ ನಾಯಕ್, ಕುಂದಾಪುರ ಹಾಗೂ ಕಾರ್ಕಳ ತಾಲೂಕು ವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ :ಮಾಜಿ ಕ್ರಿಕೆಟಿಗ ಸಚಿನ್ ತೆಂಡಲ್ಕೂರ್ ಗೆ ಕೊರೊನಾ ಪಾಸಿಟಿವ್ -Vishwanews24