ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಎಸಿ ಆಫ್ : ಉಡುಪಿ ಜಿಲ್ಲಾಧಿಕಾರಿ -Vishwanews24
ಉಡುಪಿ, : ಪರಿಸರ ರಕ್ಷಣೆ ಹಾಗೂ ಜಾಗತಿಕ ಪರಿಸರ ತಾಪಮಾನವನ್ನು ತಗ್ಗಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಲ್ಲಾ ಸರ್ಕಾರಿ ಕಚೇರಿಗಳ ಎಸಿಗಳನ್ನು ಆಫ್ ಮಾಡಿ ಕಾರ್ಯ ನಿರ್ವಹಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ವಿಶ್ವ ಪರಿಸರ ದಿನದ ಅಂಗವಾಗಿ, ಈ ವರ್ಷದ ಘೋಷವಾಕ್ಯ, ವಾಯು ಮಾಲಿನ್ಯ ನಿಯಂತ್ರಣ ಕುರಿತಾಗಿದ್ದು, ಇದನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡುವ ಕುರಿತಂತೆ ನಡೆದ ಅಧಿಕಾರಿಗಳ ಸಭೆಯಲ್ಲಿ, ಜಿಲ್ಲಾಡಳಿತದ ವತಿಯಿಂದ ಪ್ರತಿ ಸೋಮವಾರ, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಎಸಿ ಬಳಕೆ ಮಾಡದೇ ಕಾರ್ಯ ನಿರ್ವಹಿಸುವ ಕುರಿತಂತೆ ಎಲ್ಲಾ ಅಧಿಕಾರಿಗಳು ತಮ್ಮ ಒಮ್ಮತ ಸೂಚಿಸಿದ್ದು, ಇದರಿಂದ ವಿದ್ಯುತ್ ಉಳಿತಾಯದ ಜೊತೆಗೆ, ಪರಿಸರದಲ್ಲಿ ಜಾಗತಿಕ ತಾಪಮಾನ ಕಡಿಮೆ ಮಾಡಲು ಜಿಲ್ಲಾಡಳಿತದಿಂದ ಸಾಧ್ಯವಾದ ಪ್ರಯತ್ನ ಮಾಡಲಾಗುತ್ತಿದೆ ಎಂದು ಡಿಸಿ ಹೇಳಿದರು.
