ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಲು ಹಣದ ಆಮಿಷ  : ಬಿಜೆಪಿ ವಿರುದ್ದ ಹೆಚ್.ವಿಶ್ವನಾಥ್  – Vishwanews24

Featured, ರಾಜ್ಯ ನ್ಯೂಸ್

ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಲು ಹಣದ ಆಮಿಷ  : ಬಿಜೆಪಿ ವಿರುದ್ದ ಹೆಚ್.ವಿಶ್ವನಾಥ್ 

ಮೈಸೂರು: ಬಿಜೆಪಿ ವಿರುದ್ದ ಬಹಿರಂಗವಾಗಿ ಕಿಡಿಕಾರುತ್ತಿರುವ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಇದೀಗ ಸ್ವಪಕ್ಷದ ವಿರುದ್ದ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ಮೈಸೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ , ಅವರ ಮಗ ವಿಜಯೇಂದ್ರ ಹಾಗು ಶ್ರೀನಿವಾಸಪ್ರಸಾದ್ ಅವರು ನನಗೆ ಹಣ ಕೊಡಲು ಬಂದಿದ್ದರು. ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಲು ಹಣದ ಆಮಿಷ ಒಡ್ಡಿದ್ದರು ಎಂದು ರಾಜಕೀಯವಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ.

IMDB ರೇಟಿಂಗ್: ಅಗ್ರ 10ಚಿತ್ರಗಳ ಪಟ್ಟಿಯಲ್ಲಿ ಕನ್ನಡದ ಮೂರು ಸಿನಿಮಾಗಳು – Vishwanews24

ಈ ಬಗ್ಗೆ ಎಲ್ಲವನ್ನೂ ಈಗಲೇ ಹೇಳುವುದಿಲ್ಲ ಹೆಚ್ಚಿನ ಮಾಹಿತಿ ಬೇಕಿದ್ದರೆ, “ಬಾಂಬೆ ಡೈರೀಸ್ ” ನೋಡಿ. ಬಾಂಬೆ ಡೈರೀಸ್ ನ ಮೊದಲ ಅಧ್ಯಾಯದಲ್ಲೇ ಈ ವಿಚಾರವಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರನ್ನುಬೇಟಿ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ಕಾಂಗ್ರೆಸ್ ನಾಯಕರನ್ನು ಕದ್ದು ಮುಚ್ಚಿ ಭೇಟಿ ಮಾಡಿಲ್ಲ. ಇದೊಂದು ಸೌಜನ್ಯಯುತ ಭೇಟಿಯಷ್ಟೇ. ನಾನು ಎಂದಾದರೂ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರುತ್ತೇನೆಂದು ಹೇಳಿದ್ದೀನಾ? ನನ್ನನ್ನು ಬಿಜೆಪಿಗೆ ಸೇರಲು ಮಧ್ಯಸ್ಥಿಕೆ ವಹಿಸಿದವರು ಇದೇ ಶ್ರೀನಿವಾಸಪ್ರಸಾದ್. ಅವರೊಬ್ಬ ’ಅಲೆಮಾರಿಗಳ ರಾಜ ’ಎಂದು ಕಿಡಿಕಾರಿದ್ದಾರೆ.

ಕನ್ನಡ ಸಿನಿಮಾ ಮತ್ತು ಕಿರುತೆರೆ ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ವಿಧಿವಶ – Vishwanews24

Leave a Reply