ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು – Vishwanews24

Featured, ರಾಜ್ಯ ನ್ಯೂಸ್

ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು

ಬೆಂಗಳೂರು: ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಮಂಗಳವಾರ ನಡೆದ ಜೆಡಿಎಸ್‌ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ನೇತೃತ್ವದಲ್ಲಿ ಸಭೆ ನಡೆದಿತ್ತು. ಸಭೆಯಲ್ಲಿ ಪ್ರಕರಣದಿಂದ ಪಕ್ಷಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಚರ್ಚೆ ನಡೆಯಿತು. ಹಾಗೂ ಏನು ತೀರ್ಮಾನ ಕೈಗೊಳ್ಳಬಹುದು ಎಂಬ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ವ್ಯಕ್ತವಾದ ಒಕ್ಕೊರಳಿನ ಆಗ್ರಹದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಉಡುಪಿ :  ದೇಶದ ಮುಂದಿನ ಜನಾಂಗ ನೆಮ್ಮದಿಯಿಂದ ಬದುಕಲು ಬಿಜೆಪಿಗೆ ಮತ ನೀಡಿ :ಮತದಾರರಿಗೆ  ಕೋಟ ಮನವಿ – Vishwanews24

ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಈ ಘೋಷಣೆಯನ್ನು ಮಾಡಿದ್ದಾರೆ. ಸದ್ಯ ಅಮಾನತು ಮಾಡಲಾಗುದ್ದು, ಎಸ್‌ಐಟಿ ತನಿಖೆಯಲ್ಲಿ ಆರೋಪ ಸಾಬೀತಾದರೆ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದರು

Leave a Reply