ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

Featured, ರಾಷ್ಟ್ರ ನ್ಯೂಸ್

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ

ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು ರಾಜೀನಾಮೆ ನೀಡಿದ್ದಾರೆ. ಆದರೆ, ಅವರ ಅವಧಿ ಫೆಬ್ರವರಿಯಲ್ಲಿ ಕೊನೆಗೊಳ್ಳಲಿದ್ದು, ಅಲ್ಲಿಯವರೆಗೆ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ ಎಂದು ಮೂಲವೊಂದು ತಿಳಿಸಿರುವ ಬಗ್ಗೆ ʼರಾಯಿಟರ್ಸ್ʼ ವರದಿ ಮಾಡಿದೆ.

ಟಾಟಾ ಗ್ರೂಪ್ ತನ್ನ ವ್ಯವಹಾರಗಳಲ್ಲಿ ಹಲವಾರು ಸವಾಲುಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಮತ್ತು ಅವರ ಮರುನೇಮಕಕ್ಕೆ ಸಂಬಂಧಿಸಿ ಟಾಟಾ ಸನ್ಸ್ ಮತ್ತು ಟಾಟಾ ಟ್ರಸ್ಟ್‌ಗಳ ನಡುವಿನ ಭಿನ್ನಾಭಿಪ್ರಾಯದ ಬೆನ್ನಲ್ಲೆ ಈ ಬೆಳವಣಿಗೆ ನಡೆದಿದೆ.

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಟಾಟಾ ಸನ್ಸ್ ಟಾಟಾ ಸಮೂಹದ ಪ್ರಮುಖ ಸಂಸ್ಥೆಯಾಗಿದೆ. ಇದು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS), ಟಾಟಾ ಮೋಟಾರ್ಸ್ ಮತ್ತು ಏರ್ ಇಂಡಿಯಾ ಸೇರಿದಂತೆ 30ಕ್ಕೂ ಹೆಚ್ಚು ಕಂಪೆನಿಗಳನ್ನು ನಿಯಂತ್ರಿಸುತ್ತದೆ.

ಟಾಟಾ ಟ್ರಸ್ಟ್ಸ್ ಅಧ್ಯಕ್ಷ ನೋಯೆಲ್ ಟಾಟಾ ಅವರು ಚಂದ್ರಶೇಖರನ್ ಅವರ ಅಧಿಕಾರಾವಧಿ ವಿಸ್ತರಣೆಗೆ ವಿರೋಧ ವ್ಯಕ್ತಪಡಿಸಿದ ನಂತರ ಟಾಟಾ ಸನ್ಸ್ ಫೆಬ್ರವರಿಯಲ್ಲಿ ಈ ನಿರ್ಧಾರವನ್ನು ಮುಂದೂಡಿತ್ತು ಎಂದು ರಾಯಿಟರ್ಸ್‌ನ ಹಿಂದಿನ ವರದಿ ತಿಳಿಸಿತ್ತು.

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

Leave a Reply