ಟೂಲ್ಕಿಟ್ ಪ್ರಕರಣ : ನಿಕಿತಾಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ -Vishwanews24
ಟೂಲ್ಕಿಟ್ ಪ್ರಕರಣ : ನಿಕಿತಾಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ -Vishwanews24
ಮುಂಬೈ: ಟೂಲ್ಕಿಟ್ ಪ್ರಕರಣದ ಸಂಬಂಧ ಬಂಧನ ಭೀತಿ ಎದುರಿಸುತ್ತಿರುವ ವಕೀಲೆ ನಿಕಿತಾ ಜಾಕೋಬ್ಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿ ಬಾಂಬೆ ಹೈಕೋರ್ಟ್ ಆದೇಶ ಹೊರಡಿಸಿದೆ.
ರೈತರ ಪ್ರತಿಭಟನೆಗೆ ಸಂಬಂಧಿಸಿದ ‘ಟೂಲ್ಕಿಟ್’ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ವಕೀಲೆ ನಿಕಿತಾ ಜಾಕೋಬ್ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದ ನಂತರ, ಅವರು ಸೋಮವಾರ ಪೊಲೀಸ್ ಕ್ರಮದ ವಿರುದ್ಧ ರಕ್ಷಣೆಗಾಗಿ ಬಾಂಬೆ ಹೈಕೋರ್ಟ್ ಮೊರೆಹೋಗಿದ್ದರು.
ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ನಿಕಿತಾ ಜಾಕೋಬ್ಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿದೆ. ಬಂಧನ ಪ್ರಕರಣದಲ್ಲಿ ನಿಖಿತಾ ಜೇಕಬ್ ಗೆ 25 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಹಾಗೂ ಒಂದೇ ಮೊತ್ತದ ಒಂದು ಜಾಮೀನು ನೀಡಿ ಬಿಡುಗಡೆ ಮಾಡಲಾಗುವುದು ಎಂದು ನ್ಯಾಯಾಲಯ ಹೇಳಿದೆ.
ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದಾಖಲಿಸಿರುವ ಎಫ್ ಐಆರ್ ಗೆ ಸಂಬಂಧಿಸಿದಂತೆ ಮುಂಬೈ ಹೈಕೋರ್ಟ್, ನಿಖಿತಾ ಜಾಕೋಬ್ ಅವರ ನಿರೀಕ್ಷಣಾ ಜಾಮೀನು ಅರ್ಜಿಗೆ 3 ವಾರಗಳ ಕಾಲ ಅನುಮತಿ ನೀಡಿದೆ.
ಇಂಧನದ ಮೇಲಿನ ತೆರಿಗೆಯನ್ನು ಮೋದಿ ಸರ್ಕಾರ ವಾಪಸ್ ಪಡೆಯುವಂತೆ ಕಾಂಗ್ರೆಸ್ ಆಗ್ರಹ -Vishwanews24
